ನೆಲಮಂಗಲದ ಅರಿಶಿನಕುಂಟೆ ಹಾಲಿಡೇ ಾಮ್​ರ್ ಹೋಟೆಲ್​ ಸಭಾಂಗಣದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಸಭೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್​ಚೌಧರಿ, ಮಾಜಿ ಶಾಸಕ ಎಂ.ವಿ.ನಾಗರಾಜು, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್​.ಮಲ್ಲಯ್ಯ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್​, ಬಿಜೆಪಿ ತಾಲೂಕು ಉಪಾಧ್ಯಕ್ಷ ರಾಜಶೇಖರ್​, ಪ್ರಧಾನ ಕಾರ್ಯದರ್ಶಿ ಸತೀಶ್​ ಇದ್ದರು. 
ರಾಜ್ಯ

ನಾಡಿದ್ದು ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ / NELAMANAGAL

ಬೆಂಗಳೂರು ಗ್ರಾಮಾಂತರ ಡೆಸ್ಕ್
ನೆಲಮಂಗಲ : ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ರಾಜಕೀಯ ಬದುಕಿನಲ್ಲಿ 50 ವರ್ಷ ಪೂರೈಸಿದ್ದ ಹಿನ್ನೆಲೆ ಆಯೋಜಿಸಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ೇತ್ರದಿಂದ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್​ಚೌಧರಿ ತಿಳಿಸಿದರು.
ನಗರದ ಅರಿಶಿನಕುಂಟೆಯ ಹಾಲಿಡೇ ಾಮ್​ರ್ ಹೋಟೆಲ್​ ಸಭಾಂಗಣದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿ, ಯಡಿಯೂರಪ್ಪ ಅವರ ಗರಡಿಯಲ್ಲಿ ಬೆಳೆದ ಅನೇಕರು ರಾಜ್ಯ, ರಾಷ್ಟ್ರಮಟ್ಟದಲ್ಲಿ ನಾಯಕರಾಗಿದ್ದಾರೆ. ಬಿಎಸ್​ವೈ ರಾಜ್ಯದಲ್ಲಿ ಬಿಜೆಪಿ ಕಟ್ಟುವಲ್ಲಿ ಮುಂಚೂಣಿಯಲ್ಲಿದ್ದವರು. 2007ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿ 4 ಬಾರಿ ಮುಖ್ಯಮಂತ್ರಿಯಾಗಿ ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ರಾಜ್ಯದಲ್ಲಿ ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿಯಾಗಿದ್ದಾರೆ ಎಂದರು.
ಸಕಲ ಸಿದ್ಧತೆ: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತಾಲೂಕಿನಿಂದ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಿಲಿದ್ದು, 50ಕ್ಕೂ ಹೆಚ್ಚು ಬಸ್​ ವ್ಯವಸ್ಥೆ ಮಾಡಲಾಗಿದೆ. ನೆ.ಯೋ.ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್​.ಮಲ್ಲಯ್ಯ ಮಾತನಾಡಿ, ರಾಜ್ಯದ ತಳಮಟ್ಟದ ಸಂಟನೆಯಲ್ಲಿ ಯಡಿಯೂರಪ್ಪ ಅವರ ಕೊಡುಗೆ ಅಪಾರ ಎಂದು ಹೇಳಿದರು.
ರಂಗನಾಥ್​ಬಾಬು, ಮಹಿಳಾ ಮೋರ್ಚಾ ಅಧ್ಯೆ ಮಂಜುಳಾ ಸುರೇಶ್​, ಮುಖಂಡ ಉಮೇಶ್​, ಅಶ್ವತ್ಥ್​, ಗಿರೀಶ್​, ಮಂಜುನಾಥ್​, ಅರುಣ್​ಗೌಡ, ರಾಜಮ್ಮ ಪ್ರಕಾಶ್​, ವೇದಾವತಿ, ಮಂಜುಳಾ, ಶಾಂತಕುಮಾರಿ, ಮಂಜಮ್ಮ ಇತರರು ಇದ್ದರು.