ಬೆಂಗಳೂರು: ರಾಜ್ಯದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸುಧೀರ್ಘ 50 ವರ್ಷಗಳ ರಾಜಕಾರಣದ ಪ್ರಯಾಣದ ಸ್ಮರಣಾರ್ಥ ಚಿತ್ರದುರ್ಗದಲ್ಲಿ ಇಂದು(ಮೇ 09) ಕೋಟೆನಾಡು ಚಿತ್ರದುರ್ಗದಲ್ಲಿ ಅಭಿಮಾನಿಗಳಿಂದ ಬಿಎಸ್ವೈ ಅಭಿಮಾನೋತ್ಸವ ನಡೆಯಲಿದೆ.
ನಗರದ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಇಂದು ಬಿಎಸ್ವೈ ಅಭಿಮಾನೋತ್ಸವ ಆಚರಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವ ಸಾಧ್ಯತೆಯಿದ್ದು, 2 ರಿಂದ 5 ಲಕ್ಷ ಜನ ಸೇರುವ ಸಾಧ್ಯತೆ ಇದೆ. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಶುಕ್ರವಾರ ಸಂಜೆ 5ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ ಅವರನ್ನು
ನಗರದ ಕನಕವೃತ್ತದಿಂದ ಚಳ್ಳಕೆರೆ ಗೇಟ್ವರೆಗೆ ಅಲಂಕೃತ ತೆರೆದ ವಾಹನದಲ್ಲಿ ಅದ್ಧೂರಿ ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ಮಹಿಳೆಯರಿಂದ ಕುಂಭಮೇಳದ ಸ್ವಾಗತ ಮಾಡಲಾಯಿತು.