ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ Budget 2026-27 
ರಾಜ್ಯ

ಮಹಿಳೆಯರು ಮತ್ತು ಮಕ್ಕಳಿಗೆ ಬಜೆಟ್ ಸಿಹಿ; ಸಿಎಂ ಸಿದ್ದರಾಮಯ್ಯ ಕೊಟ್ಟ ಭರಪೂರ ಕೊಡುಗೆಗಳ ಲಿಸ್ಟ್ ಇಲ್ಲಿದೆ ನೋಡಿ! Budget 2026-27

Budget 2026-27: ಸರ್ಕಾರದ ಮುಂದಿನ ದಿಕ್ಸೂಚಿಯಾಗಿ ಇಂದು ಸಿಎಂ ಸಿದ್ದರಾಮಯ್ಯ ಮಂಡನೆ ಮಾಡಿದ 2026-27ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿಗೆ ಏನೆಲ್ಲಾ ಕೊಡುಗೆಗಳಿವೆ ಎಂದು ನಾವೀಗ ತಿಳಿದುಕೊಳ್ಳೋಣ.
* ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಒಂದು ಜೊತೆ ಸಮವಸ್ತ್ರ ವಿತರಣೆ ನೀಡುವುದಾಗಿ ಘೋಷಿಸಿದ್ದಾರೆ.
* ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣ, ಸ್ವಯಂ ಉದ್ಯೋಗ, ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆ ಕಾರ್ಯಕ್ರಮಕ್ಕೆ ಐದು ಕೋಟಿ ರೂ ನೀಡಲಾಗುವುದು.
* ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳ ಪ್ರೋತ್ಸಾಹಧನ 45,000 ರೂ.ಗಳಿಗೆ ಹೆಚ್ಚಳ.
* ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ “ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ” ಪ್ರಾರಂಭ.
* ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣ.
* ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ.
* ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿಯೇ ಮಧ್ಯಾಹ್ನದ ಬಿಸಿಯೂಟ.
* ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿ ರಚನೆ.