ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಚನ್ನಬಸವೇಶ್ವರ ಗುರುಕುಲ ಪದವಿ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಶ್ರೀ ಮಹಾಲಿಂಗ ಸ್ವಾಮೀಜಿ, ಪ್ರಾಚಾರ್ಯರಾದ ಡಾ.ಕಿರಣ ಸಜ್ಜನಶೆಟ್ಟಿ, ಸುಧಾಕರ ಬಿರಾದಾರ್ ಇತರರಿದ್ದರು.
- ಶ್ರೀ ಮಹಾಲಿಂಗ ಸ್ವಾಮೀಜಿ ಸಲಹೆ
- ಚನ್ನಬಸವೇಶ್ವರ ಗುರುಕುಲದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ
ಭಾಲ್ಕಿ: ವಿದ್ಯಾರ್ಥಿಗಳು ವಿನಯ, ಸರಳತೆ ಮತ್ತು ಕಠಿಣ ಪರಿಶ್ರಮದಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಶ್ರೀ ಮಹಾಲಿಂಗ ಸ್ವಾಮೀಜಿ ಹೇಳಿದರು.
ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ತಳವಾಡ(ಕೆ) ಚನ್ನಬಸವೇಶ್ವರ ಗುರುಕುಲ ಪದವಿ ಕಾಲೇಜಿನ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಪದವಿ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಬುದ್ಧಿವಂತಿಕೆ ಹಾಗೂ ಕೌಶಲಗಳನ್ನು ಬೆಳೆಸಿಕೊಂಡು ಬದುಕಿನಲ್ಲಿ ಸಾಧನೆಗೈಯಬೇಕು ಎಂದು ತಿಳಿಸಿದರು.
ಸಂಸ್ಥೆಯ ಆಡಳಿತಾಧಿಕಾರಿ ಮೋಹನ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಪಿಯುಸಿ ವಿಭಾಗದ ಪ್ರಾಚಾರ್ಯ ಬಸವರಾಜ ಮೊಳಕೀರೆ, ಪ್ರಾಚಾರ್ಯರಾದ ಡಾ.ಕಿರಣ ಸಜ್ಜನಶೆಟ್ಟಿ, ಸುಧಾಕರ ಬಿರಾದಾರ್, ಪಾಂಡುರಂಗ ಕುಂಬಾರ, ಉಪನ್ಯಾಸಕಿ ಡಾ.ಪಲ್ಲವಿ ಪಾಟೀಲ್, ಎಸ್ಬಿಐ ಮುಖ್ಯ ವ್ಯವಸ್ಥಾಪಕ ವಿಕಾಸ, ರೋಹಿತ ಯಾದವ, ಮಾರ್ಥ ಅನ್ನಮಯ್ಯ ಇತರರಿದ್ದರು. ಗಣೇಶ ಸ್ವಾಮಿ ಸ್ವಾಗತಿಸಿದರು. ಭಾಗ್ಯಶ್ರೀ ಭೂರೆ, ವೈಷ್ಣವಿ ಖೆಳಗೆ ನಿರೂಪಣೆ ಮಾಡಿ ವಂದಿಸಿದರು.