ಆರೋಗ್ಯ ಶಿಬಿರಗಳು 
ರಾಜ್ಯ

ಆರೋಗ್ಯವಂತ ಸಮಾಜ ನಿರ್ಮಾಣ ಅಗತ್ಯ-health

ಬೆಂಗಳೂರು: ಜ್ಞಾನೋದಯ ಶಿಕ್ಷಣ ಸಂಸ್ಥೆಗಳು ವತಿಯಿಂದ ಭಾನುವಾರ ಆಯೋಜಿಸಿದ್ದ ಶಿಬಿರದಲ್ಲಿ 200ಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ರಂಗದೊರೈ ಮೆಮೋರಿಯಲ್ ಆಸ್ಪತ್ರೆ ಸಹಯೋಗದಲ್ಲಿ ಶಂಕರಪುರದ ಜ್ಞಾನೋದಯ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಅಕಡೀಮ್‌ನಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ಹೃದಯ, ನೇತ್ರ, ದಂತ, ಸೀ ಸಂಬಂಧಿ ಕಾಯಿಲೆ, ಚರ್ಮರೋಗ, ಕಿವಿ, ಮೂಗು, ಗಂಟಲು, ಕ್ಯಾನ್ಸರ್ ದಕ್ತದೊತ್ತಡ ಸೇರಿ ಇತರ ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ವಿ.ಆರ್.ಶ್ರೀನಿಧಿ ಮಾತನಾಡಿ, ಪ್ರಸ್ತುತ ಜನರಲ್ಲಿ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತ, ಮೊಣಕಾಲು ಮತ್ತು ಮೂತ್ರಕೋಶಗಳ ಕಾಯಿಲೆಗಳು ಸಾಮಾನ್ಯವಾಗಿವೆ. ಆದ್ದರಿಂದ, ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಜನರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ನಮ್ಮ ಸಂಸ್ಥೆಯು ಸಮಾಜಿಕ ಕಳಕಳಿ ಇಟ್ಟುಕೊಂಡು ಆರೋಗ್ಯ ಶಿಬಿರದಂತಹ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು.
ತಂತ್ರಜ್ಞಾನ ಬೆಳೆದ ಈ ಕಾಲದಲ್ಲಿ ಜೀವನದ ಆಸೆ, ಆಮಿಷಗಳಿಗೆ ಸಿಲುಕಿ ಒತ್ತಡಗಳಿಂದ ನಲುಗುತ್ತಿರುವ ಜನರು ಸೂರ್ಯ ನಮಸ್ಕಾರ, ಯೋಗಾಭ್ಯಾಸ, ಪ್ರಾಣಾಯಾಮ ಕಲಿತು ಮಾನಸಿಕ, ದೈಹಿಕ ಒತ್ತಡಗಳು ದೂರ ಮಾಡಿಕೊಂಡು ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಒತ್ತು ಕೊಡಬೇಕು ಎಂದರು.
ರಂಗದೊರೈ ಮೆಮೋರಿಯಲ್ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ರಾಜ್‌ಕುಮಾರ್ ಸೇರಿ ಮತ್ತಿತರರಿದ್ದರು.