ಕೆ.ಆರ್.ಸಾಗರ ಅರಳಿಕಟ್ಟೆ ಬಳಿ ಬಸ್‌ಗಾಗಿ ಕಾಯುತ್ತಿರುವ ವಿದ್ಯಾರ್ಥಿಗಳು. 
ರಾಜ್ಯ

ನಿಗದಿತ ಸಮಯಕ್ಕೆ ಬಾರದ ಬಸ್

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಶಾಲಾ-ಕಾಲೇಜಿಗೆ ತೆರಳಲು
  • ವಿದ್ಯಾರ್ಥಿಗಳು ನಿತ್ಯ ಒಂದು ಗಂಟೆ ಬಸ್‌ಗಾಗಿ ಕಾಯುವ ಸ್ಥಿತಿ
ಕೆ.ಆರ್.ಸಾಗರ: ಶಾಲಾ-ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳು ನಿತ್ಯ ಒಂದು ಗಂಟೆ ಬಸ್‌ಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದಾಗಿ ಮಕ್ಕಳು ನಿಗದಿತ ಸಮಯಕ್ಕೆ ಶಾಲೆಗೆ ತೆರಳಲು ಸಾಧ್ಯವಾಗದೆ ಪರದಾಡುವಂತಾಗಿದೆ.
ನಿತ್ಯ ಬೆಳಗ್ಗೆ ಸಮಯಕ್ಕೆ ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಬಾರದ ಕಾರಣ ಈ ಮಾರ್ಗದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಇನ್ನು ತಡವಾಗಿ ಹೋದ ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸದೆ ವಾಪಸ್ ಕಳುಹಿಸಿರುವ ಘಟನೆಯೂ ನಡೆಯುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಸಮಸ್ಯೆ ಅನುಭವಿಸುವಂತಾಗಿದೆ.
ಉಚಿತ ಪ್ರಯಾಣದಿಂದಾಗಿ ನಿಗದಿತ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ಕೆಎಸ್‌ಆರ್‌ಟಿಸಿ ಆಧಿಕಾರಿಗಳು ಉಡಾಫೆ ಉತ್ತರ ನೀಡುತ್ತಿದ್ದು, ಎರಡು ದಿನಗಳಲ್ಲಿ ಸಮಸ್ಯೆ ಸರಿಪಡಿಸದಿದ್ದರೆ ವಿದ್ಯಾರ್ಥಿಗಳು, ಪಾಲಕರು, ಸ್ಥಳೀಯ ಮುಖಂಡರ ಜತೆಗೂಡಿ ಪ್ರತಿಭಟನೆ ಮಾಡುವುದಾಗಿ ಕೆ.ಆರ್.ಸಾಗರ ಗ್ರಾ.ಪಂ ಮಾಜಿ ಅಧ್ಯಕ್ಷ ನಾಗೇಂದ್ರ ಕುಮಾರ್ ಎಚ್ಚರಿಸಿದ್ದಾರೆ.