ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ 
ರಾಜ್ಯ

ಬರ, ನೀರಾವರಿ ಯೋಜನೆ ವಿಚಾರ ಬಗ್ಗೆ ಸಂಸದರಿಗೆ ಮನವರಿಕೆ: ಈ ವಾರವೇ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿಕೆಶಿ

ಪ್ರಮುಖ ಮುಖ್ಯಾಂಶಗಳು

  • ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣ
  • ಬರ, ನೀರಾವರಿ ಯೋಜನೆ ವಿಚಾರ ಬಗ್ಗೆ ಸಂಸದರಿಗೆ ಮನವರಿಕೆ
  • ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು
ಬೆಂಗಳೂರು: ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ದೆಹಲಿಗೆ ಪ್ರಯಾಣ ಬೆಳೆಸುವ ಮೊದಲು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ ಎಂದರು. ಇಂದು ದೆಹಲಿಯಲ್ಲಿ ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.
ನಾನು ಸಿಎಂ ಆದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ದೆಹಲಿಗೆ ಹೊರಟ್ಟಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜತೆಗೂ ಪ್ರಮುಖ ವಿಚಾರಗಳನ್ನು ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.