ಚಾಲಕನ ನಿಯಂತ್ರಣ ತಪ್ಪಿ ಅಪಘಾತ 
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕ ಸಾವು

ಆನಂದಕುಮಾರ ಭಮ್ಮನ್ನವರ

ಪ್ರಮುಖ ಮುಖ್ಯಾಂಶಗಳು

  • ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
  • ಹುಕ್ಕೇರಿ ತಾಲೂಕಿನ ಹಿಡಕಲ್ಲ ಜಲಾಶಯದ ಬಳಿ ಘಟನೆ
  • ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕಾರು ಪಲ್ಟಿ : ಚಾಲಕ ಸಾವು
ಚಿಕ್ಕೋಡಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಚಾಲಕ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದ ನಿವಾಸಿ ಆನಂದ ಮಲ್ಲಪ್ಪ ಗಜಬೇರಿ (33) ಪ್ರಸ್ತುತವಾಗಿರುವ ಘಟನೆ ಹಿಡಕಲ್ ಜಲಾಶಯದ ಡಯಕ್ ರಸ್ತೆಯಲ್ಲಿ ಬುಧವಾರ ನಡೆದಿದೆ.
ಜಿನರಾಳ ಗ್ರಾಮದಿಂದ ಚಿಲಭಾವಿ ಗ್ರಾಮದತ್ತ ತೆರಳುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾದ ,ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡ ಯಮಕನಮರಡಿ ಠಾಣಾ ಪೊಲೀಸರು ತಿಳಿಸಿದ್ದಾರೆ.