ಬೆಂಗಳೂರು: ನಾನು ಕರಸೇವಕ ಅಭಿಯಾನದಲ್ಲಿ ತೊಡಗಿದ್ದ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ಗಳನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಆರೋಪದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ನಗರದ ಹೈಗ್ರೌಂಡ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಆದೇಶ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ್ದ ವಕೀಲರು, ಬಿಜೆಪಿ ನಾಯಕರು ಲಂಚ ಪಡೆದಿದ್ದಾರೆ ಎಂದು ಆರೋಪಿಸುವ ಚಿತ್ರವನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಕಾನೂನು ಟಕ ನೀಡಿದ್ದ ಖಾಸಗಿ ದೂರನ್ನು ಪರಿಗಣಿಸಿ ಪ್ರಕರಣ ದಾಖಲಿಸುವಂತೆ ವಿಚಾರಣಾಧೀನ ನ್ಯಾಯಲಯ ಆದೇಶಿಸಿದೆ. ಈ ಆದೇಶ ನೀಡುವಾಗ ಸುಪ್ರೀಂ ಕೋರ್ಟ್ ನೀಡಿದ ಮಾರ್ಗಸೂಚಿಯನ್ನು ಪಾಲಿಸಲಾಗಿಲ್ಲ ಎಂದು ಆಕ್ಷೇಪಣೆಗಳನ್ನು ಸಲ್ಲಿಸಿದ್ದರು.
ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು ಎಂದು ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಪೋಸ್ಟ್ ಅಪ್ಲೋಡ್ ಮಾಡಿರುವುದು ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರು. ಸರಿಯಾಗಿ ಪ್ರಕ್ರಿಯೆ ಪಾಲಿಸದೆ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿದಾರರ ವಕೀಲರು ವಾದಿಸಿದ್ದರು. ಇದನ್ನು ನ್ಯಾಯಪೀಠ ಪರಿಗಣಿಸಿದೆ. ವಿಸತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಏನಿದು ಪ್ರಕರಣ?:
ರಾಮ ಜನ್ಮಭೂಮಿ ವಿಚಾರವಾಗಿ ಮೂರು ದಶಕಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ ಆರೋಪಿಯನ್ನು 2023ರ ಡಿಸೆಂಬರ್ನಲ್ಲಿ ಪೊಲೀಸರು ಬಂಧಿಸಿದ್ದರು. ಇದನ್ನು ಖಂಡಿಸಿದ್ದ ಬಿಜೆಪಿ ನಾಯಕರು "ನಾನೂ ಕರಸೇವಕ, ನನ್ನನ್ನೂ ಬಂಧಿಸಿ' ಅಭಿಯಾನವನ್ನು ಆರಂಭಿಸಿದ್ದರು. ಇದನ್ನು ಟೀಕಿಸುವ ಉದ್ದೇಶದಿಂದ ಬಿಜೆಪಿ ನಾಯಕರ ಬಗ್ಗೆ ಲಂಚ ಪಡೆದ ಆರೋಪಗಳೊಂದಿಗೆ ನನ್ನನ್ನು ಬಂಧಿಸಿ ಎಂಬ ಒಕ್ಕಣೆಯ ಪೋಸ್ಟ್ಗಳನ್ನು ಕೆಪಿಸಿಸಿಯ ಅಧಿಕೃತ ಖಾತೆಯಲ್ಲಿ ಹಂಚಲಾಗಿತ್ತು. ಇದರ ವಿರುದ್ಧ ಬಿಜೆಪಿ ಕಾನೂನು ಟಕ ಪ್ರಕರಣ ದಾಖಲಿಸಿತ್ತು.