ಬೆಳಗಾವಿ: ದೌರ್ಜನ್ಯಕ್ಕೆ ಒಳಗಾಗಿದ್ದ ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳಮಾರುತಿ ಠಾಣೆ ಪೊಲೀಸರು ಬೆಳಗಾವಿ ನಗರದ ಆಯೇಶಾ ಸನದಿ, ಖಾನಾಪುರ ತಾಲೂಕಿನ ಲೋಂಡಾದ ಬದ್ರುದ್ದೀನ್ ಕಿಲ್ಲೇದಾರ್ ವಿರುದ್ಧ ಮಂಗಳವಾರ ದೂರು ದಾಖಲಿಸಿದ್ದಾರೆ.
ಆರೋಪಿ ಬದ್ರುದ್ದೀನ್ ಕಿಲ್ಲೇದಾರ್ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಸಂತ್ರಸ್ತೆಯ ಕುಟುಂಬಸ್ಥರು ಮದುವೆ ಮಾಡಿಕೊಳ್ಳುವಂತೆ ಒತ್ತಾಯಿಸಿದಾಗ ಆಯೇಶಾ ಸನದಿ ಸಂತ್ರಸ್ತೆಗೆ ಮದುವೆ ವಿಚಾರ ಕೈಬಿಡು ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಮನನೊಂದ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಳು. ಇದೀಗ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ
ಎಂದು ಪೊಲೀಸರು ತಿಳಿಸಿದ್ದಾರೆ.