ಸಿಇಟಿ-2026 ದಿಕ್ಸೂಚಿ ಪುಸ್ತಕ ಬಿಡುಗಡೆ
- ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ 2026ರಲ್ಲಿ ನಡೆಸುವ ಯುಜಿಸಿಇಟಿ, ಪಿಜಿಸಿಇಟಿ, ಡಿಸಿಇಟಿ, ಕೆ-ಸೆಟ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಕೂಡ ಇದೇ ವೇಳೆ ಪ್ರಕಟ
- ಸಿಇಟಿಗೆ ಜ.17ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
- ಏ.22ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ
ಬೆಂಗಳೂರು: ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಈ ಬಾರಿಯ ಸಿಇಟಿ ಪರೀಕ್ಷೆಯನ್ನು ಏ.23 ಮತ್ತು 24ರಂದು ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರೊಂದಿಗೆ 2026ರ ಸಿಇಟಿ ದಿಕ್ಸೂಚಿ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಏ.23,24ರಂದು ಸಿಇಟಿ:
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ 2026ರಲ್ಲಿ ನಡೆಸುವ ಯುಜಿಸಿಇಟಿ, ಪಿಜಿಸಿಇಟಿ, ಡಿಸಿಇಟಿ, ಕೆ-ಸೆಟ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಕೂಡ ಇದೇ ವೇಳೆ ಪ್ರಕಟಿಸಿದರು. 2025-26ನೇ ಸಾಲಿನ ಇಂಜಿನಿಯರಿಂಗ್, ಪಶುವೈದ್ಯಕೀಯ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಏ.23 ಮತ್ತು 24ರಂದು ಸಿಇಟಿ ನಡೆಸಲಿದೆ. ಸಿಇಟಿಗೆ ಜ.17ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.
ಏ.23ರಂದು ಬೆಳಿಗ್ಗೆ 10.30ರಿಂದ ಭೌತಶಾಸ ಮತ್ತು ಮಧ್ಯಾಹ್ನ 2.30ರಿಂದ ರಾಸಾಯನಶಾಸ ಹಾಗೂ ಏ.24ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವಶಾಸ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಏ.22ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪಿಜಿಸಿಇಟಿ (ಎಂಬಿಎ, ಎಂಸಿಎ) ಮೇ 14
ಪಿಜಿಸಿಇಟಿ (ಎಂಇ, ಎಂಟೆಕ್) ಮೇ 23
ಎಲ್ಲ ವಿದ್ಯಾರ್ಥಿಗಳಿಗೂ ದಿಕ್ಸೂಚಿ ಪುಸ್ತಕ ವಿತರಣೆ
ಸಿಇಟಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈಗಾಗಲೇ ಕೆಇಎ ಚಾಟ್ ವಾಟ್, ಆೃಪ್, ಸಹಾಯವಾಣಿ ಸೇರಿ ಹಲವು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಆದರೂ ವಿದ್ಯಾರ್ಥಿಗಳು ಕೆಲವು ತಪ್ಪುಗಳನ್ನು ಮುಂದುವರಿಸಿದ್ದಾರೆ. ಮುಂದಿನ ವರ್ಷಗಳಲ್ಲಿ ಈ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸುವುದಕ್ಕಾಗಿ ಸಿಇಟಿ ಅರ್ಜಿ ಸಲ್ಲಿಸಿರುವ 3.75 ಲಕ್ಷ ವಿದ್ಯಾರ್ಥಿಗಳಿಗೆ ದಿಕ್ಸೂಚಿ ಪುಸ್ತಕವನ್ನು ವಿತರಿಸಲಾಗುತ್ತಿದೆ. ದಿಕ್ಸೂಚಿಯಲ್ಲಿ ಅರ್ಜಿ ತುಂಬುವುದರಿಂದ ಹಿಡಿದು ಶುಲ್ಕ ವಿವರ, ಲಭ್ಯವಿರುವ ಸೀಟುಗಳು, ಅರ್ಹತಾ ಮಾನದಂಡಗಳು, ಪರೀಕ್ಷಾ ಕೇಂದ್ರಗಳು, ಹೀಗೆ ಸಮಗ್ರ ವಿವರಗಳನ್ನು ನೀಡಲಾಗಿದೆ.