ಸಾಮಾನ್ಯ ಪ್ರವೇಶ ಪರೀಕ್ಷೆ 
ರಾಜ್ಯ

ಜೂ.6ರಂದು ಸಿಇಟಿ ಫಲಿತಾಂಶ ಪ್ರಕಟ: ಫಲಿತಾಂದ ವಿವರ, ಲಿಂಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಮುಖ್ಯಾಂಶಗಳು

  • ವೈದ್ಯಕೀಯ ಶಿಕ್ಷಣ ಸಚಿವರೂ ಅಗಿರುವ ಪ್ರಾಧಿಕಾರದ ಸಹ ಅಧ್ಯಕ್ಷ ಡಾ.ಶರಣ ಪ್ರಕಾಶ ಪಾಟೀಲ ಅವರು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಿ, ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ.
  • ಮಧ್ಯಾಹ್ನ 2 ಗಂಟೆ ನಂತರ ಅಭ್ಯರ್ಥಿಗಳು ಫಲಿತಾಂಶ ಪಡೆಯಬಹುದು ವೀಕ್ಷಿಸಬಹುದು- ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಏ.23 ಮತ್ತು 24ರಂದು ನಡೆದಿದ್ದ ಪರೀಕ್ಷೆಯಲ್ಲಿ 1,44,380 ಬಾಲಕರು, 1,86,099 ಬಾಲಕಿಯರು ಸೇರಿ ಒಟ್ಟು 3,30,479 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
  • ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಭೌತಶಾಸ ಹಾಗೂ ರಸಾಯನಶಾಸದ ತಲಾ ಒಂದು ಪ್ರಶ್ನೆಗೆ ಎರಡು ಕೃಪಾಂಕ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ (ಜೂ.6) ಪ್ರಕಟಿಸಲಿದೆ.
ವೈದ್ಯಕೀಯ ಶಿಕ್ಷಣ ಸಚಿವರೂ ಅಗಿರುವ ಪ್ರಾಧಿಕಾರದ ಸಹ ಅಧ್ಯಕ್ಷ ಡಾ.ಶರಣ ಪ್ರಕಾಶ ಪಾಟೀಲ ಅವರು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಟಿ ನಡೆಸಿ, ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ. ಮಧ್ಯಾಹ್ನ 2 ಗಂಟೆ ನಂತರ ಅಭ್ಯರ್ಥಿಗಳು ಫಲಿತಾಂಶ ಪಡೆಯಬಹುದು ವೀಕ್ಷಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಏ.23 ಮತ್ತು 24ರಂದು ನಡೆದಿದ್ದ ಪರೀಕ್ಷೆಯಲ್ಲಿ 1,44,380 ಬಾಲಕರು, 1,86,099 ಬಾಲಕಿಯರು ಸೇರಿ ಒಟ್ಟು 3,30,479 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಇನ್ನು ಪರೀಕ್ಷೆ ಬಳಿಕ ತಾತ್ಕಾಲಿಕ ಸರಿಯುತ್ತರಗಳನ್ನು ಬಿಡುಗಡೆ ಮಾಡಿ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ಭೌತಶಾಸ ಹಾಗೂ ರಸಾಯನಶಾಸದ ತಲಾ ಒಂದು ಪ್ರಶ್ನೆಗೆ ಎರಡು ಕೃಪಾಂಕಗಳನ್ನು ಪ್ರಕಟಿಸಿದೆ.
ಫಲಿತಾಂಶದ ವಿವರಗಳ ಲಿಂಕ್ ಮಾಹಿತಿ: