ಕರ್ನಾಟಕ ಪರೀಕ್ಷಾ ಪ್ರಾಧಿಕಾರ 
ರಾಜ್ಯ

ಸಿಇಟಿ: ಎಸ್‌ಸಿ ಒಳ ಮೀಸಲಾತಿ ಆರ್‌ಡಿ ಸಂಖ್ಯೆ ನಮೂದಿಸದಿದ್ದರೆ ಸಿಗಲ್ಲ ಸೀಟು

ಪ್ರಮುಖ ಮುಖ್ಯಾಂಶಗಳು

  • ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿನ ಲೋಪಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮಾ.30ರವರೆಗೆ ಅವಕಾಶ
  • ಅರ್ಜಿ ಸಲ್ಲಿಸಲು ಫೆ.27ರವರೆಗೆ ಅವಕಾಶವಿದೆ. ಶುಲ್ಕ ಪಾವತಿಗೆ ಮಾ.3 ಕೊನೆಯ ದಿನವಾಗಿದೆ.
  • ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆದರೆ, ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಿಸುವುದಿಲ್ಲ
ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳಲ್ಲಿನ ಲೋಪಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಮಾ.30ರವರೆಗೆ ಅವಕಾಶ ನೀಡಲಾಗಿದೆ ಎಂದು ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಫೆ.27ರವರೆಗೆ ಅವಕಾಶವಿದೆ. ಶುಲ್ಕ ಪಾವತಿಗೆ ಮಾ.3 ಕೊನೆಯ ದಿನವಾಗಿದೆ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆದರೆ, ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅರ್ಜಿಯಲ್ಲಿ ತಿದ್ದುಪಡಿಗಳನ್ನು ಮಾಡಿದ ನಂತರ ಸಲ್ಲಿಸುವ ಹಂತದಲ್ಲಿನ ಮಾಹಿತಿಗಳು ಸರ್ವರ್‌ನಲ್ಲಿ ಸೇವ್ ಆಗುತ್ತವೆ. ಹೀಗಾಗಿ, ವಿದ್ಯಾರ್ಥಿಗಳು ಪಾಲಕರೊಡನೆ ಸೂಕ್ತ ಸಮಾಲೋಚನೆ ನಡೆಸಿ ತಿದ್ದುಪಡಿಗಳನ್ನು ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಎಸ್‌ಸಿ ಒಳಮೀಸಲಾತಿ ಆರ್‌ಡಿ ಕಡ್ಡಾಯ

ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್‌ಡಿ ಸಂಖ್ಯೆ ಇರುವ ಪ್ರವರ್ಗ-ಎ, ಬಿ ಮತ್ತು ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಅರ್ಜಿಯ ಪೋರ್ಟಲ್ ನಲ್ಲಿ ಎಡಿಟಿಂಗ್ ಮಾಡುವ ಸಂಖ್ಯೆಯನ್ನು ದಾಖಲಿಸಬೇಕು. ಆರ್‌ಡಿ ಸಂಖ್ಯೆ ನಮೂದಿಸದಿದ್ದರೆ ಸೀಟು ಹಂಚಿಕೆಗೆ ಪರಿಗಣಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನೀಟ್ ಪರೀಕ್ಷೆಗೆ ಪ್ರತ್ಯೇಕ ಅರ್ಜಿ

ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಎನ್‌ಟಿಎ ನಡೆಸುವ ನೀಟ್ ಪರೀಕ್ಷೆಯ ಅಂಕಗಳನ್ನೇ ಮಾನದಂಡವಾಗಿ ಪರಿಗಣಿಸುತ್ತದೆ. ಹೀಗಾಗಿ ಈ ಕೋರ್ಸ್ ವ್ಯಾಸಂಗ ಮಾಡಲಿಚ್ವಿಸುವವರು ಎನ್‌ಟಿಎಗೂ ಪ್ರತ್ಯೇಕ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ವಿವರಿಸಿದ್ದಾರೆ.