Chain snatchers arrested within 36 hours
ಶ್ರೀನಿವಾಸಪುರ: ವೃದ್ಧೆಯ ಮಾಂಗಲ್ಯ ಸರ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 36 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅತ್ತಿಕುಂಟೆಯ ಸುಶೀಲಮ್ಮ (60) ಬಂಧಿತೆ. ಹಾಗೂ ಕಾನೂನು ಸಂರ್ಷಕ್ಕೆ ಒಳಗಾದ ಒಬ್ಬ ಬಾಲಕನನ್ನು ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.
ಜು.13ರಂದು ಯಲ್ದೂರು ಗ್ರಾಮದ ಮುನಿಲ್ಮಮ್ಮ (80) ಎಂಬುವರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ, ಬಾಲಕ ಮನೆಗೆ ಬಂದು ನಿಮ್ಮ ಮಕ್ಕಳು ನನಗೆ ಪರಿಚಯ, ನಿಮ್ಮ ಮಗ ನಿಮ್ಮನ್ನು ನೋಡಿಕೊಂಡು ಬರಲು ಕಳುಹಿಸಿದ್ದಾನೆ ಎಂದು ಹೇಳಿ ಅರ್ಧ ಗಂಟೆ ವೃದ್ಧೆಯೊಂದಿಗೆ ಮಾತುಕತೆ ನಡೆಸಿದ್ದಾನೆ. ಬಳಿಕ ಸೂಕ್ತ ಸಮಯ ನೋಡಿಕೊಂಡು ಅವರ ಕತ್ತಿನಲ್ಲಿದ್ದ 45 ಗ್ರಾಂ ಚಿನ್ನದ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದಾನೆ.
ಈ ಕುರಿತು ಮುನಿಲ್ಮಮ್ಮ ನೀಡಿದ ದೂರಿನ ಮೇರೆಗೆ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತಣವೇ ಸ್ಥಳಕ್ಕೆ ಭೇಟಿ ನೀಡಿ, ತಾಂತ್ರಿಕ ಮಾಹಿತಿ, ಸಾಗಳ ಮಾಹಿತಿ ಹಾಗೂ 50ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿದ್ದರು.
ಆರೋಪಿಗಳ ಪತ್ತೆಗೆ ಹಿರಿಯ ಅಧಿಕಾರಿಗಳ ನಿರ್ದೇಶನದಂತೆ 3 ವಿಶೇಷ ತಂಡ ರಚಿಸಲಾಗಿತ್ತು. ಜು.14ರಂದು ಹರಳಕುಂಟೆ ಮತ್ತು ಅತ್ತಿಕುಂಟೆ ಗ್ರಾಮಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಸುಶೀಲಮ್ಮ ಮತ್ತು ದೂರುದಾರ ಮುನಿಲ್ಮಮ್ಮ ಸಂಬಂಧಿಕರಾಗಿದ್ದು, ಹಳೆಯ ದ್ವೇಷದ ಹಿನ್ನೆಲೆ ಈ ಕೃತ್ಯಕ್ಕೆ ಸಂಚು ರೂಪಿಸಿದ್ದರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಂದ 45 ಗ್ರಾಂ ಚಿನ್ನದ ಸರ, ದೇವರ ಹಣ, ಎರಡು ಚಿನ್ನದ ಗುಂಡು ಸೇರಿ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಪ್ರಕರಣವನ್ನು ಪ್ರವಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ಅಧೀಕಿ ಕನ್ನಿಕಾ ಸಿಕ್ರಿವಾಲ್ ಶ್ಲಾಸಿದ್ದಾರೆ.