ಸೂಲಿಬೆಲೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾಲೇಜು ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಉಚಿತ ಕನ್ನಡಕಗಳನ್ನು ವಿತರಿಸಿದರು. ಟ್ರಸ್ಟ್ ಉಪಾಧ್ಯಕ್ಷ ಚೌಡೇಗೌಡ, ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ವೆಂಕಟೇಶ್, ಕಾಲೇಜು ಪ್ರಾಂಶುಪಾಲ ಮಂಜುನಾಥ್, ಪಿಡಿಒ ಮಂಜುನಾಥ್, ಸೈಯದ್ ಮಹಬೂಬ್ ಇತರರು ಇದ್ದರು.
ಸೂಲಿಬೆಲೆ : ಸಾಮಾಜಿಕ ಕಾಳಜಿ ಮತ್ತು ಸೇವಾ ಮನೊಭಾವದಿಂದ ಬದಲಾವಣೆ ಸಾಧ್ಯ. ಇಂತಹ ಕಾರ್ಯಕ್ಕೆ ಜೇನುಗೂಡು ರೂರಲ್ ಡೆವಲಪ್ಮೆಂಟ್ ಆ್ಯಂಡ್ ಕಲ್ಚರಲ್ ಟ್ರಸ್ಟ್ ಸಾಕ್ಷಿಯಾಗಿದೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ ಹೇಳಿದರು.
ಹೊಸಕೋಟೆ ತಾಲೂಕಿನ ಸೂಲಿಬೆಲೆ ಸರ್ಕಾರಿ ಪಿಯು ಕಾಲೇಜಿನಲ್ಲಿ ಜೇನುಗೂಡು ಟ್ರಸ್ಟ್ನಿಂದ ಹಮ್ಮಿಕೊಂಡಿದ್ದ ಉಚಿತ ಕನ್ನಡಕಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಜೇನುಗೂಡು ಟ್ರಸ್ಟ್ ಉಚಿತ ನೇತ್ರ ತಪಾಸಣೆ, ಆರೋಗ್ಯ ತಪಾಸಣೆ ಹಾಗೂ ಸರ್ಕಾರಿ ಶಾಲೆ ಕಾಲೇಜುಗಳ ಬಲವರ್ಧನೆಗೆ ಶ್ರಮಿಸುತ್ತಿದೆ ಎಂದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಮಾತನಾಡಿ, ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಅಭಿವೃದ್ಧಿಗಾಗಿ ಸದಾ ಸಹಕಾರ ನೀಡುತ್ತೇವೆ. ಕುಡಿಯುವ ನೀರಿನ ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ವರ್ಷದಲ್ಲಿ 2 ಬಾರಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಭಾಗದಲ್ಲಿ ಅನೇಕ ಜನರಿಗೆ ಆಸ್ಪತ್ರೆ ಸಹಯೋಗದಲ್ಲಿ ಉಚಿತ ಶಸ್ತ್ರಚಿಕಿತ್ಸೆ ಹಾಗೂ 300ಕ್ಕೂ ಹೆಚ್ಚು ಜನರಿಗೆ ಉಚಿತ ಕನ್ನಡಕಗಳ ವಿತರಣೆ ಮಾಡಲಾಗಿದೆ ಎಂದು ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ ತಿಳಿಸಿದರು.
ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್, ವಲಯ ಅರಣ್ಯಾಧಿಕಾರಿ ಪುಷ್ಪಾ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರಶಾಂತ್, ನಿರ್ದೇಶಕರಾದ ಸೈಯದ್ ಮಹಬೂಬ್, ಜಿಯಾವುಲ್ಲಾ, ನಯಾಜ್ ಖಾನ್, ಅತ್ತಿಬೆಲೆ ಮಂಜುನಾಥ್, ಬೆಟ್ಟಹಳ್ಳಿ ಗೋಪಿನಾಥ್, ಉಪನ್ಯಾಸಕರಾದ ಸುಬ್ರಹ್ಮಣಿ, ಕುಮಾರ್ ಇತರರು ಇದ್ದರು.