ಹೊಸೂರಿನಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ
ಗೌರಿಬಿದನೂರು: ಪ್ರತಿ ಹಳ್ಳಿಯ ಸಮಗ್ರ ಅಭಿವೃದ್ಧಿಯೇ ಪ್ರಮುಖ ಗುರಿಯಾಗಿದ್ದು, ಜನರ ನಿರೀೆಗಳಿಗೆ ಅನುಗುಣವಾಗಿ ಇನ್ನಷ್ಟು ಕಾಮಗಾರಿಗಳನ್ನು ಕೈಗೊಳ್ಳುತ್ತೇನೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಹೇಳಿದರು.Check dam
ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಉತ್ತಮ ಸಾರಿಗೆ ವ್ಯವಸ್ಥೆಯಿದ್ದಲ್ಲಿ ಮಾತ್ರ ಹಳ್ಳಿಗಳಲ್ಲಿ ಆರ್ಥಿಕ ಚಟುವಟಿಕೆಗಳು ವೇಗ ಪಡೆಯಲು ಸಾಧ್ಯ. ಆದ್ದರಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಹಾಗೂ ಸೌಕರ್ಯ ಕಲ್ಪಿಸಲು ಆದ್ಯತೆ ನೀಡುತ್ತಿದ್ದೇನೆ. ಅದರ ಫಲವಾಗಿ ದಶಕಗಳಿಂದ ಅಭಿವೃದ್ಧಿ ಭಾಗ್ಯ ಕಾಣದ ರಸ್ತೆಗಳು ಡಾಂಬರೀಕರಣಗೊಳ್ಳುತ್ತಿವೆ. ತಾಲೂಕಿನ ಪ್ರತಿ ಹಳ್ಳಿಗೂ ರಸ್ತೆ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನನ್ನ ಸಂಕಲ್ಪವಾಗಿದೆ ಎಂದರು.
ಪೌರಾಯುಕ್ತ ರಮೇಶ್ ಮಾತನಾಡಿ, ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಾಗುತ್ತಿದೆ. ಅದರ ಬೆಳವಣಿಗೆಗೆ ತಕ್ಕಂತೆ ಅಭಿವೃದ್ಧಿ ಮಾಡಬೇಕಿದೆ. ಆದ್ದರಿಂದ ಜನತೆ ಸಕಾಲಕ್ಕೆ ಕಂದಾಯ ಪಾವತಿಸುವ ಮೂಲಕ ನಗರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ನಗರದ ಚಿಕ್ಕಬಳ್ಳಾಪುರ&ಹಿಂದೂಪುರ ಬೈಪಾಸ್ ರಸ್ತೆ ಬದಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದ ಕಾಣರ ನೀರು ರಸ್ತೆಗೆ ಹರಿಯುತ್ತಿತ್ತು. ಈ ಬಗ್ಗೆ ವಾಯು ವಿಹಾರಿಗಳು ಅನೇಕ ಬಾರಿ ನಗರಸಭೆ ಆಯುಕ್ತರ ಗಮನಕ್ಕೆ ತಂದಿದ್ದರು. 12.5 ಲಕ್ಷ ರೂ.ವೆಚ್ಚದಲ್ಲಿ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಬಸವನಹಳ್ಳಿ ಕೆರೆ ಅಭಿವೃದ್ಧಿ, ಪುಲಗಾನಹಳ್ಳಿಯಲ್ಲಿ ಶಾಲೆ ಕೊಠಡಿ ನಿರ್ಮಾಣ, ಹೊಸೂರಿನಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ, 75 ಲಕ್ಷ ರೂ. ವೆಚ್ಚದಲ್ಲಿ ಹೊಸೂರು ಕೆರೆ ಪೋಷಕ ಕಾಲುವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.