ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ (85) ನಿಧನ
- ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ (85) ನಿಧನ
- ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಚೆನ್ನಮ್ಮ
- ಸೋಮವಾರ (ಜು.20) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಿಗಧಿ
ಬೆಂಗಳೂರು: ಶನಿವಾರ (ಜು.18) ರಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ (HDD Wife Chennamma) (85) ಅವರು ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 85 ವರ್ಷದ ಚೆನ್ನಮ್ಮ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಎಡರು ದಿನದ ಹಿಂದೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತೆಂದು ಹೇಳಲಾಗುತ್ತಿದೆ.
ಇನ್ನೇನು ಕೆಲವೇ ಗಂಟೆಗಳಲ್ಲಿ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಹೊರತರುವುದಾಗಿ ಮಾಹಿತಿ ದೊರೆತಿದ್ದು, ಅಂತ್ಯಸಂಸ್ಕಾರವನ್ನು ಸ್ವಗ್ರಾಮ ಹಾಸನದ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ನೆರವೇರಲಿದೆ ಎಂದು ತಿಳಿದು ಬಂದಿದೆ.
ಹಾಸನದ ಹರದನಹಳ್ಳಿಯಲ್ಲಿ ಅಂತ್ಯಸಂಸ್ಕಾರ!
ಮೊದಲು ಶರೀರವನ್ನು ಪದ್ಮನಾಭನಗರದ ಮನೆಗೆ ತೆಗೆದುಕೊಂಡು ಹೋಗಿ, ಅಲ್ಲಿ ಕುಟುಂಬದವರಿಗೆ ಹಾಗೂ ರಾಜಕಾರಣಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು,ಇಂದು ರಾತ್ರಿ ಅಥವಾ ನಾಳೆ ಬೆಳಿಗ್ಗೆ ಪಾರ್ಥಿವ ಶರೀರವನ್ನು ಹರದನಹಳ್ಳಿಗೆ ಕೊಂಡೊಯ್ಯುವುದಾಗಿ ಹೇಳಲಾಗುತ್ತಿದೆ. ನಂತರ ಸೋಮವಾರ (ಜು.20) ಸ್ವಗ್ರಾಮ ಹರದನಹಳ್ಳಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿ, ಆಮೇಲೆ ಒಕ್ಕಲಿಗ ಸಂಪ್ರದಾಯದಂತೆ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಹೇಳಲಾಗುತ್ತಿದೆ.
ಆಸ್ಪತ್ರೆಯಲ್ಲಿ ಬೀಡುಬಿಟ್ಟ ಕುಟುಂಬ!
ಚೆನ್ನಮ್ಮ ಅವರ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ಹೆಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಸೇರಿದಂತೆ ಗೌಡರ ಕುಟುಂಬವರ್ಗದವರು ಆಸ್ಪತ್ರೆಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ಡಯಾಲಿಸಿಸ್‌ಗೆ ಒಳಗಾಗುತ್ತಿರುವ ಕಾರಣ ಸದ್ಯ ಮನೆಯಲ್ಲೇ ಉಳಿದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಎರಡನೇ ಬಾರಿ ಆಸ್ಪತ್ರೆ ಸೇರಿದ್ದ ಚೆನ್ನಮ್ಮ!
2001 ನೇ ಇಸವಿಯಲ್ಲಿ ಚೆನ್ನಮ್ಮ ಅವರ ಮೇಲೆ ಆಸಿಡ್ ದಾಳಿಯಾದಾಗ ಆಸ್ಪತ್ರೆಯಲ್ಲಿ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದರು. ಅದರ ಬಳಿಕ ಇವಾಗ ಉಸಿರಾಟದ ತೊಂದರೆ ಎಂದು ಆಸ್ಪತ್ರೆ ಸೇರಿದ್ದ ಚೆನ್ನಮ್ಮ ಈದೀಗ ವಿಧಿವಶರಾಗಿದ್ದಾರೆ.