ಧಾರವಾಡ: ಕರ್ನಾಟಕ ರಾಜ್ಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ಕೋಲಾರ ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಕೋಲಾರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಂಗಣದಲ್ಲಿ ಇತ್ತೀಚೆಗೆ ಜರುಗಿದ 44ನೇ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ನಲ್ಲಿ ಕ್ರೀಡಾಕೂಟದಲ್ಲಿ ಇಲ್ಲಿನ ಚೆನ್ನಬಸವೇಶ್ವರನಗರ ನಿವಾಸಿ, 74 ವರ್ಷದ ನಿವೃತ್ತ ಅಧ್ಯಾಪಕಿ ಚೆನ್ನಮ್ಮ ಹೆಡೆ ಬೈಲೂರ 2 ಚಿನ್ನದ ಪದಕ ಪಡೆದಿದ್ದಾರೆ.
ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ 14.58 ಮೀ. ದೂರ ಎಸೆದು ಪ್ರಥಮ ಸ್ಥಾನ ಪಡೆದರು. ಟ್ರಿಪ್ಪಲ್ ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು 2 ಚಿನ್ನದ ಪದಕ ಪಡೆದರು. ಅಥ್ಲೆಟಿಕ್ಟ್ ಅಸೋಸಿಯೇಷನ್ ಅಧ್ಯಕ್ಷ ಡಿ. ಡೇವಿಡ್ ಪ್ರೇಮನಾಥ ಪದಕ ಮತ್ತು ಪ್ರಮಾಣಪತ್ರ ವಿತರಿಸಿದರು.