ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ಕುರಿತು ಚರ್ಚೆ
- ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಕುರಿತು ಚರ್ಚೆ
- ಚಿಕ್ಕೋಡಿಯಲ್ಲಿ ಸಚಿಚ ಸತೀಶ ಜಾರಕಿಹೊಳಿ ಹೇಳಿಕೆ
- ಜಿಲ್ಲಾ ಘೋಷಣೆ ಕುರಿತು ಸಿಎಂ ಜತೆ ಚರ್ಚಿಸುತ್ತೆವೆ ಎಂದ ಸತೀಶ
ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಕುರಿತು ಚರ್ಚಿಸುತ್ತೆವೆ
| ಸಚಿವ ಸತೀಶ ಜಾರಕಿಹೊಳಿ ಹೇಳಿಕೆ |
ವಿಜಯವಾಣಿ ಸುದ್ದಿಜಾಲ ಚಿಕ್ಕೋಡಿ:
ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಕುರಿತು ಮುಖ್ಯಮಂತ್ರಿ ಡಿ,ಕೆ ಶಿವುಕುಮಾರ ಜತೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸತೀಶ ಜಾರಕಿಹೊಳಿ ಹೇಳಿದರು.
ಪಟ್ಟಣದ ಸಂಸದರ ಕಚೇರಿಯಲ್ಲಿ ಭಾನುವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿದ್ದಾರೆ.
ಆಡಳಿತಾತ್ಮಕ ದೃಷ್ಟಿಯಿಂದ ಬಹುದಿನದ ಬೇಡಿಕೆಯಾಗಿರುವ ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ಘೋಷಣೆಯ ಬಗ್ಗೆ ಚರ್ಚೆ ಸರ್ಕಾರ ಮಟ್ಟದಲ್ಲಿ ಮಾಡಲಾಗುವುದು ಎಂದು ಮಾಡಿದರು.
ಜಿಲ್ಲೆ ಹಾಗೂ ರಾಜ್ಯದಲ್ಲಿ ಅನಿರೀಕ್ಷಿತವಾಗಿ ಮಳೆಯಾಗಿಲ್ಲ. ಈಚೆಗೆ ಸುರಿದ ಮಳೆಯಿಂದ ಜಲಾಶಯಕ್ಕೆ ನೀರು ಸಂಗ್ರಹವಾಗಿದೆ. ಇದರಿಂದ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ. ಮಳೆ ಅಭಾವದಿಂದ ಉಂಟಾದ ಬೆಳೆ ಹಾನಿ ಸರ್ಕಾರದಿಂದ ಶೀಘ್ರವೇ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಿದರು.ಇದೇ ವೇಳೆ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು.
ವೀರಕುಮಾರ ಪಾಟೀಲ, ಲಕ್ಷ್ಮಣರಾವ್ ಚಿಂಗಳೆ, ಎಚ್.ಎಸ್.ನಸಲಾಪುರೆ, ಶಿವಾನಂದ ಮರ್ಯಾಯಿ, ರುದ್ರಪ್ಪ ಸಂಗಪ್ಪಗೋಳ, ಕಿರಣ ರಜಪೂತ, ಮಾರುತಿ ಕುಂದಿ ಇತರರಿದ್ದರು.