Child dies after falling into hole dug for elevator construction 
ರಾಜ್ಯ

ಲಿಫ್ಟ್​ ನಿರ್ಮಾಣಕ್ಕೆ ತೋಡಿದ್ದ ಗುಂಡಿಗೆ ಬಿದ್ದು ಮಗು ಸಾವು

ಚಿಕ್ಕಬಳ್ಳಾಪುರ ಡೆಸ್ಕ್
ಗೌರಿಬಿದನೂರು: ಹಿರೇಬಿದನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಿಫ್ಟ್​ ನಿರ್ಮಾಣಕ್ಕೆ ತೋಡಿದ್ದ ಗುಂಡಿಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರಿನ ಶ್ರೀರಾಮಂಪುರದ ಕಾರ್ಮಿಕರಾದ ರಾಜಪಾಲ್​ ಹಾಗೂ ಶ್ವೇತಾ ದಂಪತಿ ಪುತ್ರಿ ಪಲ್ಲವಿ ಮೃತೆ.

ಸುರಕ್ಷತಾ ಕ್ರಮಗಳಿರಲಿಲ್ಲ

ಕಾಮಗಾರಿ ಸ್ಥಳದಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನು ಅನುಸರಿಸಿದ್ದರೆ ಮಗುವಿನ ಜೀವ ಉಳಿಯುತ್ತಿತ್ತು. ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರ ಹಾಗೂ ಅಧಿಕಾರಿಗಳ ರ್ನಿಲಕ್ಷ$್ಯವೇ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿರುವ ಸಾರ್ವಜನಿಕರು, ಮೃತ ಮಗುವಿನ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಕೊರಬೇಕು. ಸುರಕ್ಷತಾ ನಿಯಮಗಳನ್ನು ಪಾಲಿಸದ ಗುತ್ತಿಗೆದಾರ ಹಾಗೂ ಮೇಲ್ವಿಚಾರಣೆ ಜವಾಬ್ದಾರಿ ಹೊತ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಹಿಂಭಾಗ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಲಿಫ್ಟ್​ ನಿರ್ಮಾಣಕ್ಕಾಗಿ ಗುಂಡಿ ತೋಡಲಾಗಿತ್ತು. ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದು, ಮಗು ಆಟವಾಡುತ್ತಿದ್ದಾಗ ಗುಂಡಿಗೆ ಬಿದ್ದು ಮೃತಪಟ್ಟಿದೆ. ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ ಪರೀಾ ಕೊಠಡಿ ಮುಂಭಾಗ ಪಾಲಕರು ಕಣ್ಣೀರು ಹಾಕುತ್ತಿರುವ ದೃಶ್ಯ ಎಲ್ಲರ ಕಣ್ಣನ್ನು ಒದ್ದೆಯಾಗಿಸಿತ್ತು. ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.