ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಉದ್ಘಾಟಿಸಿದರು. ವಿಶ್ವಾರಾಧ್ಯ ಇಜೇರಿ, ಶರಣಪ್ಪ ಹಳಿಮನಿ, ಡಾ.ಶರಣಬಸಪ್ಪ ಕ್ಯಾತನಾಳ್, ಡಾ.ವೆಂಕಟೇಶ ಶಿಂದಿಹಟ್ಟಿ, ಮಹಮ್ಮದ್ ಬಶೀರ್ ಅನ್ಸಾರಿ, ಮಂಜುಳಾ ಪಾಟೀಲ್ ಇತರರಿದ್ದರು.
- ನ್ಯಾಯಾಧೀಶ ಶ್ರೀನಿವಾಸ ನವಲೆ ಅಭಿಮತ
- ಸೇಂಟ್ ಮೇರಿ ಕಾಲೇಜಿನಲ್ಲಿ ಕಾರ್ಯಕ್ರಮ
ಕಲಬುರಗಿ: ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಮಕ್ಕಳ ಪಾತ್ರ ಮಹತ್ವದ್ದಾಗಿದ್ದು, ಬಾಲಕಾರ್ಮಿಕ ಪದ್ಧತಿಯು ದೇಶದ ಪ್ರಗತಿಗೆ ಅಡ್ಡಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.
ಸೇಂಟ್ ಮೇರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಿಂದ ಶುಕ್ರವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಉದ್ಯೋಗದಲ್ಲಿ ತೊಡಗಿಸುವುದು ನಿಷೇಧ. ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳು ತಮ್ಮ ಅಮೂಲ್ಯ ಬಾಲ್ಯ ಕಳೆದುಕೊಳ್ಳುವುದರ ಜತೆಗೆ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿಶ್ವಾರಾಧ್ಯ ಇಜೇರಿ ಮಾತನಾಡಿ, ಬಾಲಕಾರ್ಮಿಕ ಹಾಗೂ ಭಿಾಟನೆ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಮಾಹಿತಿ ನೀಡಬೇಕು. ವಲಸೆ ಮಕ್ಕಳನ್ನು ಗುರುತಿಸಿ ಅವರಿಗೆ ಶಿಕ್ಷಣ ಕಲ್ಪಿಸಲು ಸರ್ಕಾರ ಮತ್ತು ಸಮಾಜ ಒಟ್ಟಾಗಿ ಶ್ರಮಿಸಬೇಕು ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶರಣಪ್ಪ ಹಳಿಮನಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳುವ ಮಾಲೀಕರಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿೆ ಹಾಗೂ 20ರಿಂದ 50 ಸಾವಿರ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಶಿಂದಿಹಟ್ಟಿ, ಸಹಾಯಕ ಕಾರ್ಮಿಕ ಆಯುಕ್ತ ಮಹಮ್ಮದ್ ಬಶೀರ್ ಅನ್ಸಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ್, ಫಾದರ್ ಜೋಸೆಫ್ ಪ್ರವಿಣ್, ಆನಂದರಾಜ್, ಶಿವಕುಮಾರ ರೇಷ್ಮೆ, ವಿಠ್ಠಲ ಚಿಕ್ಕಣಿ, ಸಂತೋಷ ಕುಲಕರ್ಣಿ ಇತರರಿದ್ದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಸೇಂಟ್ ಮೇರಿ ಶಾಲೆವರೆಗೂ ಜಾಥಾ ನಡೆಯಿತು.
"
ಬಾಲಕಾರ್ಮಿಕ ಪದ್ಧತಿಗೆ ಬಡತನ ಪ್ರಮುಖ ಕಾರಣವಾಗಿದ್ದು, ಇಂತಹ ಕುಟುಂಬಗಳಿಗೆ ಸರ್ಕಾರದ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸಬೇಕು. ಬಾಲಕಾರ್ಮಿಕತೆ ನಿಮೂರ್ಲನೆ ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ, ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಬೇಕಿದೆ.
— ಶ್ರೀನಿವಾಸ ನವಲೆ, ಹಿರಿಯ ಸಿವಿಲ್ ನ್ಯಾಯಾಧೀಶ