ಅಪಘಾತದಲ್ಲಿ ಧಗಧಗನೆ ಹೊತ್ತಿ ಉರಿದ ಬಸ್-ಲಾರಿ
- ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಬಸ್-ಲಾರಿ ಅಪಘಾತ
- ಚಿತ್ರದುರ್ಗದ ಹಿರಿಯೂರಿನ ಬಳಿ ಅಪಘಾತ
- ಅಪಘಾತದಲ್ಲಿ ಲಾರಿ ಚಾಲಕ ಸಾವು! ಬಸ್ ಚಾಲಕ, ನಿರ್ವಾಹಕ ಪಾರು
- ಬಸ್ಸಿನಲ್ಲಿ ಪ್ರಯಾಣಿಸಲು ಬುಕ್ಕಿಂಗ್ ಮಾಡಿದವರ ಪಟ್ಟಿ ಹೊರಗೆ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನ ಹಳ್ಳಿ ಎಚ್ಪಿ ಪೆಟ್ರೋಲ್ ಬಂಕ್ ಬಳಿ ಇಂದು (ಡಿ.25) ಬೆಳಗಿನ ಜಾವ 2 ಗಂಟೆ ಸುಮಾರಿಗೆ ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವರು ಸಜೀವ ದಹನವಾಗಿದ್ದರೆ ಎಂದು ಹೇಳಲಾಗಿದೆ.
ಬೆಂಗಳೂರು ಕಡೆಯಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಗೆ ಡಿವೈಡರ್ ಹಾರಿ ಬಂದ ಲಾರಿ ರಭಸದಿಂದ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಬಸ್ಸಿನಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿದೆ.
ಬಸ್ ಚಾಲಕ, ನಿರ್ವಾಹಕ ಪವಾಡದಂತೆ ಪಾರು
ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದು, ಅಪಘಾತದಲ್ಲಿ ಉತ್ತರ ಪ್ರದೇಶ ಮೂಲದ ಡ್ರೈವರ್ ಕುಲದೀಪ್ ಸಾವಿಗೀಡಾಗಿದ್ದಾರೆ. ಇನ್ನು ಇದೇ ವೇಳೆ ಬಸ್ನ ಚಾಲಕ ಮತ್ತು ನಿರ್ವಾಹಕ ಪವಾಡದಂತೆ ಪಾರಾಗಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್ನಿಂದ ಹೊರಗೆ ಜಿಗಿದು ಬಚಾವ್ ಆಗಿದ್ದಾರೆ.
ಬಸ್ಸಿನಲ್ಲಿ ಪ್ರಯಾಣಿಸಲು ಬುಕ್ಕಿಂಗ್ ಮಾಡಿದವರ ಪಟ್ಟಿ (32 ಪೈಕಿ 28 ಜನ ಮಾತ್ರ ಬುಕ್ಕಿಂಗ್)
24. ಮಸ್ರುತುನ್ನಿಸ ಎಸ್ಎನ್