Chowdeshwari Temple join hands for Nimarna
ಕೊರಟಗೆರೆ: ತಾಲೂಕಿನ ಬೋಡಬಂಡೇನಹಳ್ಳಿಯಲ್ಲಿರುವ ಪ್ರಸಿದ್ಧ ಶ್ರೀ ಚೌಡೇಶ್ವರಿ ದೇವಸ್ಥಾನವು ಸುದೀರ್ಘ ಇತಿಹಾಸ ಹೊಂದಿದ್ದು, ನಮ್ಮ ಧಾರ್ಮಿಕ ಹಾಗೂ ಸಾಂಸತಿಕ ಪರಂಪರೆಯ ಅಮೂಲ್ಯ ಆಸ್ತಿಯಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಅನಿಲ್ ಕುಮಾರ್ ತಿಳಿಸಿದರು.
ಶನಿವಾರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ದೇಗುಲದ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿ
ಮಾತನಾಡಿ, ಈ ದೇಗುಲ ಪ್ರಮುಖ ಧಾರ್ಮಿಕ ಹಾಗೂ ಸಾಂಸತಿಕ ಪರಂಪರೆಯ ಸಂಕೇತವಾಗಿ ಗುರುತಿಸಿಕೊಂಡಿದೆ. ಈ ದೇವಾಲಯ ಗ್ರಾಮಸ್ಥರು ಮತ್ತು ದೇವಸ್ಥಾನ ಸಮಿತಿಯ ಸಹಕಾರದೊಂದಿಗೆ ಮರು ನಿಮಾರ್ಣ ಮಾಡಲಾಗುತ್ತಿದೆ. ಸದ್ಯ ಕಟ್ಟಡ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಉಳಿದ ಕೆಲಸಗಳನ್ನು ಪೂರ್ಣಗೊಳಿಸಲು ಆರ್ಥಿಕ ಕೊರತೆ ಎದುರಾಗಿದೆ. ಹೀಗಾಗಿ ದಾನಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ನಾನು ಸಹ ದೇವಸ್ಥಾನದ ನಿಮಾರ್ಣ ಕಾರ್ಯಕ್ಕೆ ನನ್ನ ಕೈಲಾದ ಧನಸಹಾಯ ಹಾಗೂ ಸಹಕಾರವನ್ನು ಶೀಘ್ರದಲ್ಲೇ ಒದಗಿಸುತ್ತೇನೆ. ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಾರ್ವಜನಿಕರು ಹಾಗೂ ಭಕ್ತರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.