ಕರ್ನಾಟಕ ಪರೀಕ್ಷಾ ಪ್ರಾಧಿಕಾರ 
ರಾಜ್ಯ

ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ

ಪ್ರಮುಖ ಮುಖ್ಯಾಂಶಗಳು

  • ಅಭ್ಯರ್ಥಿಗಳ ಅಂಕಗಳನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಆ.17ರ ಮಧ್ಯಾಹ್ನ 12.30ರೊಳಗೆ ಕೆಇಎಗೆ ಸಲ್ಲಿಸಬಹುದು
  • 3,991 ಹುದ್ದೆಗಳಿಗೆ ಬೆಂಗಳೂರಿನ 149 ಸೇರಿ ರಾಜ್ಯದ 884 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆ
  • ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಭಾ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸೃಷ್ಟಿಯಾಗಿರುವ ಗೊಂದಲದ ಬಗ್ಗೆ ಕೆಇಎ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿತ್ತು.
ಬೆಂಗಳೂರು:

ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಆ.2ರಂದು ನಡೆಸಿದ್ದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳ ಅಂಕಗಳನ್ನು ಪ್ರಕಟಿಸಲಾಗಿದೆ. ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಆ.17ರ ಮಧ್ಯಾಹ್ನ 12.30ರೊಳಗೆ ಕೆಇಎಗೆ ಸಲ್ಲಿಸಬಹುದು ಎಂದು ತಿಳಿಸಿದೆ.
3,991 ಹುದ್ದೆಗಳಿಗೆ ಬೆಂಗಳೂರಿನ 149 ಸೇರಿ ರಾಜ್ಯದ 884 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಯಲ್ಲಿ ಉಳಿಕೆ ಮೂಲ ವೃಂದದ 3,77,861 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅವರಲ್ಲಿ ಶೇ 92.52 ಮಂದಿ ಹಾಜರಾಗಿದ್ದರು. ಕಲ್ಯಾಣ ಕರ್ನಾಟಕ ವೃಂದದ 76,676 ಅಭ್ಯರ್ಥಿಗಳ ಪೈಕಿ ಶೇ. 94 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.
ವಿಜಯಪುರ ಜಿಲ್ಲೆಯ ತಿಕೋಟಾದ ಶಾರದಾಂಭಾ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸೃಷ್ಟಿಯಾಗಿರುವ ಗೊಂದಲದ ಬಗ್ಗೆ ಕೆಇಎ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿತ್ತು. ಆ ಕೇಂದ್ರದಲ್ಲಿ ಒಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆಗಳು ಹೊಂದಾಣಿಕೆ ಆಗುತ್ತಿಲ್ಲ ಎಂದು ಗೊಂದಲ ಸೃಷ್ಟಿಸಿದ ಅಭ್ಯರ್ಥಿಗಳು ತಮ್ಮ ಬಳಿ ಇದ್ದ ಒಎಂಆರ್ ಮತ್ತು ಪ್ರಶ್ನೆ ಪತ್ರಿಕೆ ಸಮೇತ ಕಾಂಪೌಂಡ್ ಹಾರಿ ಹೋಗಿದ್ದು ಏಕೆ?, ಈ ರೀತಿ ಗೊಂದಲ ಸೃಷ್ಟಿಸುವವರ ಉದ್ದೇಶ ಏನು ಎನ್ನುವುದು ತನಿಖೆಯಿಂದ ಗೊತ್ತಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಶ್ನಿಸಿದ್ದರು.