ರಾಜ್ಯ

ಕಲಬುರಗಿಯಲ್ಲಿ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ತರಬೇತಿ

ಬಾಬುರಾವ ಯಡ್ರಾಮಿ
ಕಲಬುರಗಿ: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪಿ) ವತಿಯಿಂದ “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ (KSAPCC)” ಕುರಿತ ತರಬೇತಿ ಕಾರ್ಯಕ್ರಮವನ್ನು ಶುಕ್ರವಾರ ಹಳೆಯ ಪಂಚಾಯತ್ ಸಭಾಂಗಣದಲ್ಲಿ (ಪ್ರಸ್ತುತ ಕೃಷಿ ಇಲಾಖೆಯ ಸಭಾಂಗಣ) ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಕಲಬುರಗಿ ಮುಖ್ಯ ಯೋಜನಾಧಿಕಾರಿಗಳಾದ ಎಸ್.ಎಸ್. ಮಠಪತಿ ಉದ್ಘಾಟಿಸಿ, ಹವಾಮಾನ ಬದಲಾವಣೆಯನ್ನು ತಡೆಗಟ್ಟುವಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಡಾ. ಪವಿತ್ರಾ ಪಿ. ನಾಯಕ್ ಅವರು ಕರ್ನಾಟಕ ರಾಜ್ಯ ಹವಾಮಾನ ಕ್ರಿಯಾ ಯೋಜನೆಯ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು. ಜಲ ಸಂಪನ್ಮೂಲ ಇಲಾಖೆಯ ಸಹಾಯ ಅಭಿಯಂತರರಾದ ತೇಜಸ್ ಕುಮಾರ್ ಅವರು ಜಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಚೌಕಟ್ಟಿನ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸುಮಾರು 50 ಮಂದಿ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದ ಯಶಸ್ಸಿಗೆ ಎನ್.ಆರ್.ಡಿ.ಎಂ.ಎಸ್ ಅಧಿಕಾರಿಗಳಾದ ಭೀಮಸೇನ್ ಹಾಗೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಜಯ್ ಕುಮಾರ್ ಸಹಕಾರ ನೀಡಿದರು. ಎಂಪ್ರಿ ಸಂಸ್ಥೆಯ ರಾಘವೇಂದ್ರ ಎನ್. ಹಾಗೂ ಸಂಶೋಧನಾ ಸಹಾಯಕಿ ಹೆಮಾ ಕಾರ್ಯಕ್ರಮದ ನಿರ್ವಹಣೆಯಲ್ಲಿ ಸಹಕರಿಸಿದರು.