ಯಾದಗಿರಿ ಡಿಸಿ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ರಾಹುಲ್ ತುಕರಾಮ ಪಾಂಡ್ವೆ ಮಾತನಾಡಿದರು. ಡಿಎಚ್ಒ ಡಾ.ಮಹೇಶ ಬಿರಾದಾರ ಇತರರಿದ್ದರು.
- ಜಿಲ್ಲಾಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಸೂಚನೆ
- ಪರಿಶೀಲನಾ ಸಭೆ
ಯಾದಗಿರಿ: ಜಿಲ್ಲೆಯಲ್ಲಿ ನಕಲಿ ವೈದ್ಯರಿಂದಾಗುವ ಸಾವು ನೋವುಗಳು ಬಗ್ಗೆ ತೀವ್ರ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ರಾಹುಲ್ ತುಕರಾಮ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ಡಿಸಿ ಕಚೇರಿಯಲ್ಲಿ ವಿವಿಧ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಬಗ್ಗೆ ಪ್ರಗತಿ ಸೋಮವಾರ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೆಪಿಎಂ ಕಾಯ್ದೆ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು.
ವಡಗೇರಾ ತಾಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ತ ವೈದ್ಯರ ಹುದ್ದೆಗಳು ಕೂಡಲೇ ಭರ್ತಿಮಾಡಲು ಸೂಕ್ತ ಕ್ರಮಕೈಗೊಳ್ಳುವಂತೆ ಡಿಎಚ್ಒ ಅವರಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬಾಲ್ಯವಿವಾಹ, ಅನೇಮಿಯಾ ಪ್ರಕರಣ ಹೆಚ್ಚಾಗಿರುವುದರಿಂದ ಆದಷ್ಟು ಕಡಿಮೆ ಮಾಡಲು ಸೂಕ್ತ ಕ್ರಮಕೈಗೊಳ್ಳಬೇಕು. ಹೆರಿಗೆಗಾಗಿ ಬೇರೆ ಜಿಲ್ಲೆಗೆ ತೆರಳುವ ಗರ್ಭಿಣಿಯರ ಪ್ರಮಾಣ ಕಡಿಮೆಮಾಡಲು ಮಾಡಬೇಕು ಎಂದರು.
ಮಳೆಗಾಲ ಆರಂಭವಾಗಿರುವುದರಿಂದ ವಾಂತಿ, ಭೇದಿ ಪ್ರಕರಣಗಳು ಸಂಭವಿಸುವ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ನೀರಿನ ಮೂಲ ಪರೀಸಲು ಹಾಗೂ ಮುನ್ನೆಚ್ಚರಿಕೆಯನ್ನು ಜಿಲ್ಲಾ ಮಟ್ಟದಲ್ಲಿ ಒಂದು ವಾಟ್ಸಪ್ ಗ್ರೂಪ್ ಆರಂಭಿಸಿ ಅದರಲ್ಲಿ ಡಿಸಿ, ತಾಪಂ ಇಒ, ಗ್ರಾಪಂ ಪಿಡಿಒಗಳನ್ನು ಗ್ರೂಪ್ನಲ್ಲಿ ಸೇರಿಸಲು ಜಿಲ್ಲಾ ಸರ್ವೇಣಾಧಿಕಾರಿಗಳಿಗೆ ತಾಕೀತು ಮಾಡಿದರು.
ಆಯುಷ್ಮಾನ್ ಆರೋಗ್ಯ ಕಾರ್ಯಕ್ರಮದಡಿ ಕಡಿಮೆ ಪ್ರಗತಿ ಸಾಧಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒಂದು ತಿಂಗಳ ಅವಕಾಶ ನೀಡಿ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸೂಚಿಸಿದರು. ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿ ಇತರರಿದ್ದರು. ಡಿಎಚ್ಒ ಡಾ.ಮಹೇಶ ಬಿರಾದಾರ ಸ್ವಾಗತಿಸಿದರು.
ಅಂಗನವಾಡಿಯಲ್ಲಿ 9427 ಮಕ್ಕಳ ತಪಾಸಣೆ
ಜಿಲ್ಲಾ ಆರ್ಸಿಎಚ್ ಅಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಎಎನ್ಸಿ ನೋಂದಣಿ ಶೇ.90 ಆಗಿದ್ದು, ಜಿಲ್ಲೆಯಲ್ಲಿ ಒಟ್ಟು 63 ಪ್ರತಿಶತ ಸಿಜೇರಿಯನ್ ಹೆರಿಗೆಗಳು ಖಾಸಗಿ ಆಸ್ಪತ್ರೆಯಲ್ಲಿ ಜರುಗಿರುತ್ತವೆ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.27 ಸಿಜೆರಿಯನ್ ಹೆರಿಗೆ ಆಗಿವೆ. ರಾಷ್ಟ್ರೀಯ ಬಾಲ ಸ್ವಾಸ್ಥ$್ಯ ಕಾರ್ಯಕ್ರಮದಡಿಯಲ್ಲಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಏಪ್ರಿಲ್ ತಿಂಗಳ ಅಂತ್ಯದವರೆಗೆ ಅಂಗನವಾಡಿ ಕೇಂದ್ರಗಳಲ್ಲಿ 9427 ಮಕ್ಕಳಿಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ತಿಳಿಸಿದರು. ಈ ವೇಳೆ ಡಿಸಿ ಅವರು ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವ ಸಿಜೆರಿಯನ್ ಹೆರಿಗೆಗಳ ಬಗ್ಗೆ ಪರಿಶೀಲಿಸಲು ಸೂಚಿಸಿದರು.
ಖಾಲಿ ವೈದ್ಯರ ಹುದ್ದೆಗಳು ಭರ್ತಿ ಮಾಡಿ
ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರು ಹಾಗೂ ಎಂಬಿಬಿಎಸ್ ವೈದ್ಯರು ಸೇರಿ ಒಟ್ಟು 25 ಹುದ್ದೆ ಖಾಲಿ ಇದ್ದು, ಇವುಗಳನ್ನು ಭರ್ತಿಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಿ
ಯಾದಗಿರಿ: ಜಿಲ್ಲೆಯ ಎಲ್ಲ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಾಹುಲ್ ತುಕರಾಮ ಪಾಂಡ್ವೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ತಣ ಸಹಾಯವಾಣಿ ಆರಂಭಿಸಬೇಕು. ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಎಲ್ಲ ಕೊಳವೆಬಾವಿಗಳಿಗೆ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಬೇಕು. ಎಲ್ಲ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಕಟ್ಟಡ ಪರವಾನಗಿ, ಆಸ್ತಿ ತೆರಿಗೆ ಹಾಗೂ ವ್ಯಾಪಾರ ಪರವಾನಗಿಗಳಿಗೆ ಸಂಬಂಧಿಸಿದ ಬಾಕಿ ತೆರಿಗೆ ಶ್ರೀ ಸಂಗ್ರಹಿಸಬೇಕು. ಸ್ಥಳಿಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮಾಸಿಕ ವೇತನ ವಿಳಂಬ ಮಾಡದೆ ತ್ವರಿತವಾಗಿ ಪಾವತಿಸುವಂತೆ ಹಾಗೂ ಅವರ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ನಡೆಸುವಂತೆ ಅವರು ತಿಳಿಸಿದರು.
ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಿ
ಯಾದಗಿ: ವಿಶೇಷ ಟಕ&ಗಿರಿಜನ ಉಪಯೋಜನೆಯಡಿ ಮಂಜೂರಾದ ಅನುದಾನವನ್ನು ಗುರಿಗೆ ಅನುಗುಣವಾಗಿ ಕಡ್ಡಾಯವಾಗಿ ವಿನಿಯೋಗಿಸುವಂತೆ ಜಿಲ್ಲಾಧಿಕಾರಿ ರಾಹುಲ್ ತುಕರಾಮ ಪಾಂಡ್ವೆ ಅಧಿಕಾರಿಗಳಿಗೆ ಸೂಚಿಸಿದರು. ಯಾವುದೇ ಕಾರಣ, ಸಬೂಬು ನೀಡದೆ ಗುರಿಗೆ ಅನುಗುಣವಾಗಿ ಶೇ.100ಪ್ರಗತಿ ಸಾಧಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಕಳೆದ ವರ್ಷ ಶೇ.50 ಮಾತ್ರ ಅನುದಾನ ಬಳಕೆಯಾಗಿದೆ. ಶೇ.100 ಅನುದಾನ ಬಳಕೆಯಾಗದೆ ಇರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದರು. ತೋಟಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿಯಲ್ಲಿ ರ್ನಿಲ್ಯ ಎದ್ದು ಕಾಣುತ್ತಿದೆ. ಹೀಗೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ರ್ನಿಲ್ಯ ಸರಿಯಲ್ಲ. ಕಲ್ಯಾಣ ಕರ್ನಾಟಕ ಭಾಗದ ಜನತೆಯ ಜಿಡಿಪಿ ಕಡಿಮೆ ಇದೆ. ಖಾಸಗಿ ಬಂಡವಾಳ ಹೂಡಿಕೆ, ಕೈಗಾರಿಕೆಗಳ ಸ್ಥಾಪನೆಯಲ್ಲಿ ಹಿಂದಿದೆ. ಸರ್ಕಾರದ ಅನುದಾನ ಮಾತ್ರ ಇಲ್ಲಿಗೆ ಬರುವದರಿಂದ ಆ ಅನುದಾನವೂ ಬಳಸಲಿಲ್ಲ ಅಂದರೆ ಹೇಗೆ ಎಂದು ಪ್ರಶ್ನಿಸಿಸಿದರು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ಲವೀಶ್ ಒರ್ಡಿಯಾ ಸೇರಿ ಇತರೆ ಅಧಿಕಾರಿಗಳಿದ್ದರು.