ವಾತಾವರಣ 
ರಾಜ್ಯ

ರಾಜ್ಯದಲ್ಲಿ 4 ದಿನ ಮೋಡ ಕವಿದ ವಾತಾವರಣ:ಕೆಲವೆಡೆ ಸಾಧಾರಣ ಮಳೆ-Cloudy weather

ಪ್ರಮುಖ ಮುಖ್ಯಾಂಶಗಳು

  • ರಾಜ್ಯದಲ್ಲಿ ನ.9ರವರೆಗೆ ಮೋಡ ಕವಿದ ವಾತಾವರಣ
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ
  • ದಿನದಿನಕ್ಕೆ ಚಳಿ ಆವರಿಸಿಕೊಳ್ಳುತ್ತಿದೆ
ಬೆಂಗಳೂರು: ತಮಿಳುನಾಡು, ಆಂಧ್ರಪ್ರದೇಶದ ಕರಾವಳಿ ತೀರದಲ್ಲಿ ಮೇಲ್ಮೈ ಸುಳಿಗಾಳಿ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ನ.9ರವರೆಗೆ ಮೋಡ ಕವಿದ ವಾತಾವರಣ (Cloudy weather) ಇರಲಿದೆ.
ಉತ್ತರ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಬುಧವಾರ ಮಳೆಯಾಯಿತು.ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಮತ್ತು ಬಳ್ಳಾರಿಯಲ್ಲಿ ನ.6ರಿಂದ ನ.8ರವರೆಗೆ ಸಾಧಾರಣ ವರ್ಷಧಾರೆಯಾಗಲಿದೆ.
ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮುಂದಿನ 2 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಈ ಅವಧಿಯಲ್ಲಿ ಹಗುರ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 20 ಡಿ.ಸೆ. ದಾಖಲಾಗಬಹುದು.
ತಾಪಮಾನ ಕುಸಿತ: ಮೋಡ ಕವಿದ ವಾತಾವರಣದಿಂದ ರಾಜ್ಯದಲ್ಲಿ ದಿನದಿನಕ್ಕೆ ಚಳಿ ಆವರಿಸಿಕೊಳ್ಳುತ್ತಿದೆ. ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ರಾಯಚೂರು, ಮಂಗಳೂರು ಮತ್ತು ಹೊನ್ನಾವರ ಸೇರಿ ರಾಜ್ಯದ ಇತರ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಮತ್ತು ಕನಿಷ್ಠ ತಾಪಮಾನದಲ್ಲಿ 1-2 ಡಿ.ಸೆ.ಉಷ್ಣಾಂಶ ಕುಸಿತವಾಗಿದೆ.