CM 
ರಾಜ್ಯ

CM ಡಿಕೆಶಿಯ 6 ಮಹತ್ವದ ಘೋಷಣೆಗಳು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 56 ಸಾವಿರ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(CM) ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಸಾಮಾನ್ಯರು, ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮೊದಲ ಹಂತದಲ್ಲೇ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿದೆ.
ಹೌದು, ಸಿಎಂ DK Shivakumar ತಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲೇ 'ಆರು ಪ್ರಮುಖ' ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಹೊಸ ಆಡಳಿತದ ಸಾರಥಿ ಇಡೀ ರಾಜ್ಯಕ್ಕೆ ಬಂಪರ್ ಗಿಫ್ಟ್ ನೀಡಿದ್ದಾರೆ.

ಪ್ರಮುಖ ಘೋಷಣೆಗಳು

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ರಾಜ್ಯದ ಎಲ್ಲಾ ಹಂತದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಸರ್ಕಾರ ಘೋಷಿಸಿದೆ. ಈ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
56 ಸಾವಿರ ಹುದ್ದೆಗಳ ನೇಮಕಾತಿ – ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 56 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸುವುದಾಗಿ ತಿಳಿಸಿದೆ. ಇದರ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಉಚಿತ ಕೌಶಲ್ಯ ತರಬೇತಿ – ಖಾಸಗಿ ವಲಯದಲ್ಲಿ ಉದ್ಯೋಗ ಹುಡುಕುವ ಯುವಕರಿಗಾಗಿ ಸರ್ಕಾರದಿಂದಲೇ ವಿಶೇಷ ಆನ್‌ಲೈನ್ ವೇದಿಕೆಯನ್ನು ನಿರ್ಮಿಸಲಾಗುತ್ತಿದೆ. ಆಸ್ಪತ್ರೆ, ಹೋಟೆಲ್ ಹಾಗೂ ಇತರ ಉದ್ಯಮಗಳ ಅಗತ್ಯಕ್ಕೆ ತಕ್ಕಂತೆ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸುವ ಯೋಜನೆಯೂ ಜಾರಿಯಾಗಲಿದೆ.
ಯುವಕರ ಸಂಘಗಳಿಗೆ ಪ್ರೋತ್ಸಾಹಧನ- ಗ್ರಾಮೀಣ ಭಾಗದ ಯುವಕರಲ್ಲಿ ನಾಯಕತ್ವ ಮತ್ತು ಸಾಮಾಜಿಕ ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಪ್ರತಿ ಪಂಚಾಯಿತಿಯಲ್ಲಿ 'ಭಾರತ್ ಜೋಡೋ ಯುವಕರ ಸಂಘ' ರಚಿಸಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ 10 ಸಾವಿರ ಸಂಘಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು.
ಬೆಂಗಳೂರು ಅಭಿವೃದ್ಧಿಗೆ 2,000 ಕೋಟಿ – ಒಸಿಸಿ ಸಮಸ್ಯೆಯಿಂದ ಸಂಕಷ್ಟದಲ್ಲಿರುವ ಕಟ್ಟಡ ಮಾಲೀಕರಿಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ರಸ್ತೆ ಅಭಿವೃದ್ಧಿಗಾಗಿ ಹೊಸದಾಗಿ 2 ಸಾವಿರ ಕೋಟಿ ರೂ. ಅನುದಾನ ಘೋಷಿಸಲಾಗಿದ್ದು, ನಗರ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ.
ಈ ಘೋಷಣೆಗಳು ರಾಜ್ಯದ ಯುವಕರು, ವಿದ್ಯಾರ್ಥಿಗಳು ಹಾಗೂ ಮಧ್ಯಮ ವರ್ಗದ ಜನರಿಗೆ ಹೊಸ ನಿರೀಕ್ಷೆ ಮೂಡಿಸಿದ್ದು, ಸರ್ಕಾರದ ಮೊದಲ ಪ್ರಮುಖ ನಿರ್ಧಾರಗಳಾಗಿ ಗಮನ ಸೆಳೆಯುತ್ತಿವೆ.