ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( cm siddaramaiah) ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸಕ್ಕೆ ಉಪಾಹಾರ ಕೂಟಕ್ಕೆ ಆಗಮಿಸಿದ್ದಾರೆ.
ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಮಾಜಿ ಸಂಸದ ಡಿ ಕೆ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆದರದಿಂದ ಸ್ವಾಗತಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಕಳೆದ ಶನಿವಾರ ಡಿ ಕೆ ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಆಹ್ವಾನಿಸಿದ್ದರು. ಈ ಮೂಲಕ ವಾರದೊಳಗೆ ಉಭಯ ನಾಯಕರ ಎರಡನೇ ಉಪಾಹಾರ ಮೀಟಿಂಗ್ ಇದಾಗಿದೆ.
ಉಪಾಹಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಾಟಿ ಕೋಳಿ ಸಾರು, ಇಡ್ಲಿ ಹಾಗೂ ನಾಟಿ ಕೋಳಿ ಫ್ರೈ ಉಣಬಡಿಸಲಾಗುವುದು. ಸಿದ್ದರಾಮಯ್ಯ ಅವರಿಗೆ ನಾಟಿ ಕೋಳಿ ಇಷ್ಟ ಎಂಬ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅಧಿಕೃತ ನಿವಾಸದಲ್ಲಿ ಬೆಳೆದ ಕನಕಪುರದ ನಾಟಿ ಕೋಳಿಯಿಂದಲೇ ಮೆನು ಸಿದ್ಧಪಡಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.