ಕೆ.ಆರ್.ನಗರದ ಎಚ್.ಡಿ.ದೇವೇಗೌಡ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಮಾಜಿ ಸಚಿವ ದಿ.ಎಸ್.ನಂಜಪ್ಪ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಡಿ.ರವಿಶಂಕರ್ ಪುಷ್ಪಾರ್ಚನೆ ಮಾಡಿದರು. ಕೆ.ಎನ್.ಬಸಂತ್, ಚಂದ್ರಕುಮಾರ್,ಹೆಬ್ಬಾಳು ವೇಣುಗೋಪಾಲ್, ಕೆ.ಎನ್.ಪ್ರಸನ್ನಕುಮಾರ್ ಇತರರಿದ್ದರು.
ಕೆ.ಆರ್.ನಗರ: ತಾಲೂಕಿನ ಹಿರಿಯ ಸಹಕಾರಿ, ಸಹಕಾರ ರತ್ನ ಪುರಸ್ಕ್ಕತ ಮಾಜಿ ಸಚಿವ ದಿ.ಎಸ್.ನಂಜಪ್ಪ ಅವರ 12ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಸೋಮವಾರ ಪಟ್ಟಣದ ಶ್ರೀರಾಮ ಬಡಾವಣೆಯ ಎಚ್.ಡಿ.ದೇವೇಗೌಡ ಸಮುದಾಯ ಭವನದಲ್ಲಿ ನಡೆಯಿತು.
ಇದರ ಅಂಗವಾಗಿ ಗೀತಗಾಯನ ಕಾರ್ಯಕ್ರಮ, ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ನೂರಾರು ಮಂದಿ ಎಸ್.ನಂಜಪ್ಪ ಅವರ ಅಭಿಮಾನಿಗಳು ಮತ್ತು ಸಾರ್ವಜನಿಕರು ಇದರ ಅನುಕೂಲ ಪಡೆದುಕೊಂಡರು. ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಭೋಜನ ವ್ಯವಸ್ಥೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಸಕ ಡಿ.ರವಿಶಂಕರ್, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮಾಜಿ ಸಚಿವ ಸಾ.ರಾ.ಮಹೇಶ್, ಮುಡಾ ಮಾಜಿ ಅಧ್ಯಕ್ಷ ಎಚ್.ಎನ್.ವಿಜಯ್, ಎಸ್.ನಂಜಪ್ಪರವರ ಧರ್ಮಪತ್ನಿ ಲಲಿತಮ್ಮ, ಪುತ್ರರಾದ ತಂಬಾಕು ಮಂಡಳಿ ನಿವೃತ್ತ ಅಧಿಕಾರಿ ಕೆ.ಎನ್.ದಿನೇಶ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್, ಮೊಮ್ಮಗ ಡಿ.ಅನುಶ್ರುತ್, ತಾಲೂಕು ಕಸಾಪ ಅಧ್ಯಕ್ಷ ಡಿಂಡಿಮ ಶಂಕರ್, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷೆ ಸರೋಜನಾರಾಯಣ್, ನಿರ್ದೇಶಕರಾದ ಕೇಶವ್, ವೈ.ಎಸ್.ಕುಮಾರ್, ಚಂದ್ರಕುಮಾರ್, ವ್ಯವಸ್ಥಾಪಕ ನಿರ್ದೇಶಕ ಸಿ.ಸುರೇಶ್, ಮಾಜಿ ನಿರ್ದೇಶಕ ಹೆಬ್ಬಾಳು ವೇಣುಗೋಪಾಲ್, ನಗರಯೋಜನಾ ಪ್ರಾಧಿಕಾರದ ನಿರ್ದೇಶಕ ಕೆ.ಎನ್.ಪ್ರಸನ್ನಕುಮಾರ್, ಮುಖಂಡ ಬಾಲೂರು ನಂಜುಂಡೇಗೌಡ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ನವನಗರ ಅರ್ಬನ್ ಬ್ಯಾಂಕ್ ಸಿಬ್ಬಂದಿ, ಎಸ್.ನಂಜಪ್ಪ ಎಜುಕೇಷನ್ ಚಾರಿಟಬಲ್ ಟ್ರಸ್ಟ್, ಉದಯರವಿ ಚಿಟ್ಸ್, ಉದಯರವಿ ಗೃಹ ನಿರ್ಮಾಣ ಸಹಕಾರ ಸಂಘ, ಭಾಗೀರಥಿ ವಿವಿಧೋದ್ದೇಶ ಸಹಕಾರ ಸಂಘ, ಕಾವೇರಿ ಸ್ಪೋರ್ಟ್ಸ್ ಮತ್ತು ರಿಕ್ರಿಯೇಷನ್ ಕ್ಲಬ್‌ನ ಪದಾಧಿಕಾರಿಗಳು, ಎಸ್.ನಂಜಪ್ಪ ಅಭಿಮಾನಿ ಬಳಗದವರು ಪಾಲ್ಗೊಂಡಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದಲ್ಲಿರುವ ನವನಗರ ಅರ್ಬನ್ ಕೋ ಆಫರೇಟಿವ್ ಬ್ಯಾಂಕಿನ ಆಡಳಿತ ಕೇಂದ್ರ ಕಚೇರಿ ಆವರಣದಲ್ಲಿರುವ ದಿ.ಎಸ್.ನಂಜಪ್ಪನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮತ್ತು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.