ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಕೆಳಕಂಡ ಪರೀಕ್ಷಾ ಕೇಂದ್ರಗಳಲ್ಲಿ ಇದೇ ಏಪ್ರಿಲ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜರುಗಲಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ ಇಂತಿದೆ. ಕಲಬುರಗಿ ಹಳೆಯ ಜೇವರ್ಗಿ ರಸ್ತೆಯ ಪಿ ಆಂಡ್ ಟಿ ಕಾಲೋನಿಯಲ್ಲಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕಲಬುರಗಿ ಎಸ್.ಪಿ.ಆಫೀಸ್ ಹತ್ತಿರದ ಸರಕಾರಿ ಹೆಣ್ಣು ಮಕ್ಕಳ ಪದವಿ ಪೂರ್ವ ಕಾಲೇಜು, ಸಂತ್ರಾಸವಾಡಿ ಜಿ.ಡಿ.ಎ. ಯಲ್ಲಿರುವ ಹ್ಯುಮನ್-ಏಜ್-ಗುಲ್ಶನ್-ಏ- ಅತ್ಫಾಲ್ ಹೈಸ್ಕೂಲ್ ಹಾಗೂ ದರ್ಗಾ ರಸ್ತೆಯಲ್ಲಿರುವ ಫರ್ಹಾನ್ ಹೈಸ್ಕೂಲ್.
ವಿದ್ಯಾರ್ಥಿಗಳು ಏಪ್ರಿಲ್ ಮೊದಲನೆ ವಾರದಲ್ಲಿ ಪ್ರವೇಶಾತಿ ಪತ್ರ (ಹಾಲ್ ಟಿಕೇಟ್)ಗಳನ್ನು https://dom.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮುಖಾಂತರ ಡೌನ್‍ಲೋಡ್ ಮಾಡಿಕೊಳ್ಳಲು ಅಥವಾ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ ಮತ್ತು ತಾಲ್ಲೂಕು ಕಚೇರಿಯನ್ನು ಹಾಗೂ ಸಂಬಂಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.