Complaint filed against three people for creating a disturbance.
ಮುಳಬಾಗಿಲು: ಹಾಲು ಪರೀಕ್ಷೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉರುಕುಂಟೆ ಮಿಟ್ಟೂರು ಗ್ರಾಮದ ನಿವಾಸಿ ಶ್ರೀನಿವಾಸ (44) ನೀಡಿದ ದೂರಿನ ಮೆರೆಗೆ, ಜು.5ರಂದು ಸಂಜೆ 6ರ ಸುಮಾರಿಗೆ ಗ್ರಾಮದ ಹಾಲು ಡೈರಿಯಲ್ಲಿ ಹಾಲು ಪರೀಕ್ಷೆ ಮಾಡುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಚಿತ್ತೇರಿ ಗ್ರಾಮದ ಮಂಜುನಾಥ್, ನಿಖಿಲ್, ನಾಗೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.