ಕಾಳೇನಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಮಂಜು ಭೂಮಿಪೂಜೆ ಮಾಡಿದರು. ಪ್ರಭಾಕರ್, ಆನಂದ, ಮೂರ್ತಿಚಾರ್, ಗೋವಿಂದೇಗೌಡ, ಕುಮಾರ್, ಬಸವರಾಜಯ್ಯ, ಗಣೇಶ್ ಮೂರ್ತಿ, ವಿಠಲ, ಸುರೇಶ್ ಇದ್ದರು. 
ರಾಜ್ಯ

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಅಭಿನಯ್ ಎಚ್.ಎಂ

ಪ್ರಮುಖ ಮುಖ್ಯಾಂಶಗಳು

  • ಕಾಳೇನಹಳ್ಳಿ ಗ್ರಾಮ
  • 65 ಲಕ್ಷ ರೂ. ವೆಚ್ಚದಲ್ಲಿ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ
ಅರಕಲಗೂಡು: ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ 65 ಲಕ್ಷ ರೂ. ವೆಚ್ಚದಲ್ಲಿ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎ.ಮಂಜು ಭೂಮಿಪೂಜೆ ನೆರವೇರಿಸಿದರು.
ಕಾಳೇನಹಳ್ಳಿಯಲ್ಲಿ ಆರೋಗ್ಯ ಉಪ ಕೇಂದ್ರದ ಅವಶ್ಯಕತೆ ಇತ್ತು. ಇದು ಕಾರ್ಯಾರಂಭಗೊಂಡ ಬಳಿಕ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅಗತ್ಯ ಆರೋಗ್ಯ ಸೇವೆಗಳು ಸ್ಥಳೀಯವಾಗಿಯೇ ಲಭ್ಯವಾಗಲಿದ್ದು, ಚಿಕಿತ್ಸೆಗಾಗಿ ದೂರದ ಪ್ರದೇಶಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದೆ. ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟಕ್ಕೆ ಯಾವುದೇ ರಾಜಿ ಮಾಡಿಕೊಳ್ಳದೆ, ನಿಯಮಾನುಸಾರ ಕಾಮಗಾರಿ ಕೈಗೊಳ್ಳಬೇಕು ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
ಮುಖಂಡರಾದ ಪ್ರಭಾಕರ್, ಆನಂದ, ಮೂರ್ತಿಚಾರ್, ಗೋವಿಂದೇಗೌಡ, ಕುಮಾರ್, ಬಸವರಾಜಯ್ಯ, ಗಣೇಶ್ ಮೂರ್ತಿ, ವಿಠಲ, ಸುರೇಶ್ ಹಾಗೂ ಗ್ರಾಮಸ್ಥರು ಇದ್ದರು.