ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ ಎಂ.ಗೆ ನೌಕರರು ಮನವಿ ಸಲ್ಲಿಸಿದರು. ಲಕ್ಷಿ$್ಮ ಸುಳಗೇಕರ, ಸಾಗರ ಕಾಂಬಳೆ, ಎಸ್​.ಎಸ್​.ಪಾಟೀಲ ಇತರರಿದ್ದರು. 
ರಾಜ್ಯ

ಸಿಬ್ಬಂದಿ ಮೇಲೆ ಹಲ್ಲೆಗೆ ಖಂಡನೆ

ಬೆಳಗಾವಿ: ಬೆಂಗಳೂರಿನ ಶಿವಾಜಿ ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪಾಲಿಕೆ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲು ಆಗ್ರಹಿಸಿ ಬುಧವಾರ ಮಹಾನಗರ ಪಾಲಿಕೆ ಅಧಿಕಾರಿ, ಸಿಬ್ಬಂದಿ ಪ್ರತಿಭಟಿಸಿದರು. ಬಳಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ಪಾಲಿಕೆ ಕಂದಾಯ ವಿಭಾಗದ ಇಂಜಿನಿಯರ್​, ಅಧಿಕಾರಿ, ಸಿಬ್ಬಂದಿ ಒತ್ತುವರಿ ತೆರವು ಕೈಗೊಂಡಿದ್ದಾರೆ. ಆದರೆ, ಕೆಲ ಸಂಟನೆಗಳ ಸದಸ್ಯರು, ಬೀದಿ ಬದಿ ವ್ಯಾಪಾರಿಗಳು, ಕಟ್ಟಡಗಳ ಮಾಲೀಕರು ಸರ್ಕಾರಿ ನೌಕರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಕೆ ಸಿಬ್ಬಂದಿ ಕಾರ್ಯನಿರ್ವಹಿಸಲು ಹಿಂದೇಟು ಹಾಕುತ್ತಿದ್ದಾರೆ.
ರಾಜ್ಯದಲ್ಲಿ ಪಾಲಿಕೆ ಸೇರಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ತೆರವು ಕಾರ್ಯಾಚರಣೆ ಕೈಗೊಳ್ಳುವ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಬೇಕು. ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪಾಲಿಕೆ ಅಭಿವೃದ್ಧಿ ವಿಭಾಗದ ಉಪ ಆಯುಕ್ತೆ ಲಕ್ಷಿ$್ಮ ಸುಳಗೇಕರ, ಸಾಗರ ಕಾಂಬಳೆ, ಎಸ್​.ಎಸ್​.ಪಾಟೀಲ, ಯಲ್ಲೇಶ ಎಲ್​.ಬಿ., ಶ್ರೀಕಾಂತ ಐ. ಇತರರಿದ್ದರು.