Constitution is the foundation of unity of the country
ಶಿರಾ : ಡಾ.ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಮೂಲ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಪ್ರತಿಯೊಬ್ಬ ನಾಗರಿಕನಿಗೂ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ ಎಂದು ಮಾಜಿ ಶಾಸಕ ಡಾ.ರಾಜೇಶ್ ಗೌಡ ತಿಳಿಸಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿ, ಸಂವಿಧಾನವು ದೇಶದ ಏಕತೆ ಮತ್ತು ಸಮಾನತೆಯ ಬುನಾದಿಯಾಗಿದ್ದು, ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕುವಂತೆ ಮಾಡಿರುವುದು ಅವರ ಅಪೂರ್ವ ಸಾಧನೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಅಂಬೇಡ್ಕರ್ ಅವರ ಸಂದೇಶವು ಇಂದಿಗೂ ಪ್ರಸ್ತುತವಾಗಿದ್ದು, ಯುವಕರು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಾಬು ಜಗಜೀವನ್ ರಾಮ್ ಅವರ ಸಾಧನೆಗಳನ್ನೂ ಸ್ಮರಿಸಲಾಯಿತು.