ಸರಗೂರು ತಾಲೂಕಿನ ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಮೂಲಕ ಉದ್ಘಾಟಿಸಿ ಹಾಗೂ ಅಂಬೇಡ್ಕರ್ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಶಾಸಕರು ಹಾಗೂ ಗಣ್ಯರು ಮಾಡಿದರು.
ಸರಗೂರು: ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ ಒದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಹಸೀಲ್ದಾರ್ ಮೋಹನಕುಮಾರಿ ತಿಳಿಸಿದರು.
ತಾಲೂಕಿನ ಜಯಚಾಮರಾಜೇಂದ್ರ ಕ್ರೀಡಾಂಗಣ ಅವರಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 77ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು, ಸಂವಿಧಾನ ಜಾರಿಗೆ ಬಂದಾಗಿನಿಂದ ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿ, ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ ಎಂದರು.
ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ರಘೋತ್ತಮ್, ಪ.ಪಂ.ಅಧ್ಯಕ್ಷೆ ಚೈತ್ರಾಸ್ವಾಮಿ, ಸದಸ್ಯ ಶ್ರೀನಿವಾಸ, ಅದಿಕರ್ನಾಟಕ ಮಹಾಸಭಾ ಮಾಜಿ ಅಧ್ಯಕ್ಷ ಶಿವಣ್ಣ ಮಾತನಾಡಿದರು.
ಕಾರ್ಯಕ್ರಮದ ಮುನ್ನ ಬೆಳ್ಳಿ ರಥದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಪೀಠಿಕೆ ಕೂರಿಸಿ ಪಟ್ಟಣ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಎಲ್ಲ ವಿವಿಧ ಶಾಲೆಗಳಿಂದ ಬಂದಿದ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಪ.ಪಂ. ಅಧ್ಯಕ್ಷೆ ಚೈತ್ರಾಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ಚಂದ್ರಕಲಾ ರಾಜಣ್ಣ, ಶ್ರೀನಿವಾಸ, ಸಣ್ಣತಾಯಮ್ಮ, ಚೆಲುವ ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಚೆಲುವರಾಜು, ಗ್ರಾಪಂ ಸದಸ್ಯ ಬೆಟ್ಟಸ್ವಾಮಿ, ಜಿಪಂ ಮಾಜಿ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ ನಿಂಗರಾಜು, ಶಿವಣ್ಣ, ಸೇವಾದಳ ತಾಲೂಕು ಮಣಿಕಂಠ, ಗ್ರಂಥಪಾಲಕ ಬಿಡಗಲು ಶಿವಣ್ಣ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ್, ಕರ್ನಾಟಕ ರಾಜ್ಯ ವಕ್ಫ್ ಪರಿಷತ್ ಸದಸ್ಯ ಸುಭಾನ್, ತಂಬಾಕು ಮಂಡಳಿಯ ಕ್ರಾಪ್ ಕಮಿಟಿಯ ಸದಸ್ಯ ಪರಶಿವಮೂರ್ತಿ, ಚಿಕ್ಕಮಾದು ಅಭಿಮಾನಿಗಳ ಬಳಗದ ಅಧ್ಯಕ್ಷ ರಾಜನಾಯಕ, ಇಒ ಪ್ರೇಮ್ ಕುಮಾರ್,ಪಪಂ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್, ಗ್ರೇಡ್-2 ತಹಸೀಲ್ದಾರ್ ಪರಶಿವಮೂರ್ತಿ, ಉಪತಹಸೀಲ್ದಾರ್ ಸುನೀಲ್, ರವಿಂದ್ರ, ಮುಜೀಬ್, ರವಿಚಂದ್ರ, ಎಪಿಎಂಸಿ ಕಾರ್ಯದರ್ಶಿ ಕೃಷ್ಣಮೂರ್ತಿ, ಲಯನ್ಸ್ ಅಕಾಡೆಮಿ ಶಾಲೆ ಮುಖ್ಯಶಿಕ್ಷಕ ದಾಸಚಾರಿ, ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ, ಮುಖಂಡರಾದ ಅಣ್ಣಯ್ಯ ಸ್ವಾಮಿ, ಕೆಇಬಿ ಕಾರ್ಯಪಾಲಕ ಎಂಜಿನಿಯರ್ ರಮೇಶ್, ಶಂಭು, ಬೋಗಯ್ಯ, ಬಂಗಾರಯ್ಯ, ಮುಖಂಡರು ಇದ್ದರು.