ಯಾದಗಿರಿ ಜಿಲ್ಲೆಯ ಬಸಂತಪುರದಿಂದ ಶಹಾಪುರ ತಾಲೂಕಿನ ಸಿರವಾಳ ಗ್ರಾಮದವರೆಗೆ ನಡೆಯುತ್ತಿರುವ ಭಾರತ್‌ಮಾಲಾ ರಾಷ್ಟ್ರೀಯಾ ಹೆದ್ದಾರಿ ಕಾಮಗಾರಿಯನ್ನು ಸಂಸದ ಜಿ.ಕುಮಾರ ನಾಯಕ ಪರಿಶೀಲಿಸಿದರು.
- ಸಂಸದ ಜಿ.ಕುಮಾರ ನಾಯಕ ಸೂಚನೆ
- ಯಾದಗಿರಿಯಲ್ಲಿ ಅಽಕಾರಿಗಳ ಸಭೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಭಾರತ್‌ಮಾಲಾ ಯೋಜನೆಯಡಿ ನಿರ್ಮಾಣವಾಗುತ್ತಿರುವ ಚನೈ-ಸೂರತ್
ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೇಳೆ ರೈತರಿಗೆ ತೊಂದರೆಯಾಗದAತೆ ಅಗತ್ಯವಿರುವ ಕಡೆ ಅಂಡರ್‌ಪಾಸ್ ನಿರ್ಮಿಸಬೇಕು ಎಂದು ಜಿ.ಕುಮಾರ ನಾಯಕ ಹೇಳಿದರು.
ಜಿಲ್ಲೆಯ ಬಸಂತಪುರದಿಂದ ಶಹಾಪುರ ತಾಲೂಕಿನ ಸಿರವಾಳ್ ಗ್ರಾಮದವರೆಗೆ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಪರಿಶೀಲಿಸಿ ನಗರದಲ್ಲಿ ಬುಧವಾರ ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿಗೆ ಬಳಸುವ ಸಾಮಗ್ರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ನಿಗದಿತ ಮಾನದಂಡದಂತೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಹೆದ್ದಾರಿ ನಿರ್ಮಾಣದಿಂದ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯವಿರುವ ಕಡೆಗಳಲ್ಲಿ ಅಂಡರ್‌ಪಾಸ್ ನಿರ್ಮಿಸಬೇಕು. ರೈತರು ತಮ್ಮ ಜಮೀನುಗಳಿಗೆ ಸುಗಮವಾಗಿ ತೆರಳಲು ಅನುಕೂಲವಾಗುವಂತೆ ಸರ್ವೀಸ್ ರಸ್ತೆಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ತಾಕೀತು ಮಾಡಿದರು.
ಅದೇ ರೀತಿ ಗ್ರಾಮಗಳ ಪ್ರವೇಶ ನಿರ್ಗಮನ, ಅಂಡರ್‌ಪಾಸ್, ಸರ್ವೀಸ್ ರಸ್ತೆ ಹಾಗೂ ತಿರುವುಗಳಿರುವ ಸ್ಥಳಗಳಲ್ಲಿ ವಾಹನ ಸವಾರರಿಗೆ ಸ್ಪಷ್ಟವಾಗಿ ಮಾಹಿತಿ ದೊರೆಯುವಂತೆ ಸೂಚನಾ ಫಲಕ ಹಾಗೂ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಅಳವಡಿಸಬೇಕು. ಈ ಕಾಮಗಾರಿ ನಿರ್ಮಾಣ ವೇಳೆ ರೈತರು ಹೊಲಕ್ಕೆ ಹೋಗಲು ದಾರಿ ಬಂದ್ ಆಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಹೆದ್ದಾರಿ ಕಾಮಗಾರಿಯಿಂದ ಸ್ಥಳೀಯ ಜನರಿಗೆ ಹಾಗೂ ರೈತರಿಗೆ ಉಂಟಾಗಬಹುದಾದ ಸಮಸ್ಯೆಯನ್ನು ಅಽಕಾರಿಗಳು ಸ್ಥಳದಲ್ಲಿಯೇ ಪರಿಶೀಲಿಸಿ, ಅವುಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು. ಕಾಮಗಾರಿಯ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸುವುದರ ಜತೆಗೆ, ವಿಳಂಬಕ್ಕೆ ಅವಕಾಶ ನೀಡದೆ ನಿಗದಿತ ಅವಽಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು.
ಈ ವೇಳೆ ಕಾಮಗಾರಿಗೆ ಸಂಬಂಸಿದ ಅಧಕಾರಿಗಳು, ಸ್ಥಳೀಯ ಮುಖಂಡರು ಹಾಗೂ ರೈತರು ಸಭೆಯಲ್ಲಿ ಭಾಗವಹಿಸಿದ್ದರು.