ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್. ತಂಗಡಗಿ  
ರಾಜ್ಯ

ಸಿದ್ದರಾಮೇಶ್ವರ ಹೆಸರಲ್ಲಿ ಸಮುದಾಯ ಭವನ ನಿರ್ಮಾಣ

ಬೆಂಗಳೂರು: ಸಿದ್ದರಾಮೇಶ್ವರ ಗುರುಗಳ ಹೆಸರಿನಲ್ಲಿ 10 ಭೋವಿ ಸಮುದಾಯ ಭವನ ನಿರ್ಮಿಸುವುದಾಗಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಘೋಷಣೆ ಮಾಡಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್. ತಂಗಡಗಿ ಮಾಡಿದ ಮನವಿಗೆ ಸಮ್ಮತಿಸಿದ ಮುನಿಯಪ್ಪ, ಜಿಲ್ಲಾವಾರು ಸಿಎ ನಿವೇಶನಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಪಟ್ಟಿ ಪಡೆದು ಭವನ ನಿರ್ಮಾಣಕ್ಕೆ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಹಾಗೆಯೇ, ಲಂಬಾಣಿ ಸಮುದಾಯದ ಅಭಿವೃದ್ಧಿಗಾಗಿ ಬಂಜಾರ ಸಮುದಾಯ ಭವನಗಳನ್ನು ನಿರ್ಮಿಸಲಾಗುವುದು. ಪರಿಶಿಷ್ಟ ಜಾತಿಯ ನೂರೊಂದು ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಹೇಳಿದರು.
ಸಮುದಾಯ ಭವನಗಳು ಅಧ್ಯಯನ ಕೇಂದ್ರಗಳಾದಾಗ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ. ಆದ್ದರಿಂದ ಭವನದಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು ಎಂದು ಸಚಿವರು ಅಭಿಪ್ರಾಯಪಟ್ಟರು.
ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್ ಕೆ.ಪಿ., ಆಯುಕ್ತ ರಾಕೇಶ್ ಕುಮಾರ್ ಇದ್ದರು.