ಹುಲಸೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯನ್ನು ತಾಲೂಕು ಉಸ್ತುವಾರಿ ಅಧಿಕಾರಿ ರಜನಿಕಾಂತ್ ಮಾತನಾಡಿದರು. ತಹಸೀಲ್ದಾರ್ ಶಿವಾನಂದ ಮೇತ್ರೆ, ತಾಪಂ ಇಒ ಮಹಾದೇವ ಜಮ್ಮು, ಜೆಸ್ಕಾಂ ಇಲಾಖೆ ಎಇಇ ಗಣಪತಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
- ತಾಲೂಕು ಉಸ್ತುವಾರಿ ಅಧಿಕಾರಿ ರಜನಿಕಾಂತ ಅಭಯ
- ಹುಲಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ
ಹುಲಸೂರು : ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಜಿಲ್ಲಾಧಿಕಾರಿ ಜತೆ ಚರ್ಚಿಸಿ ಆದಷ್ಟು ಬೇಗನೆ ಪ್ರಜಾಸೌಧ ನಿರ್ಮಾಣ ಮಾಡಲಾಗುವುದು ಎಂದು ತಾಲೂಕು ಉಸ್ತುವಾರಿ ಅಧಿಕಾರಿ ರಜನಿಕಾಂತ ಭರವಸೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕಿನ ಸಾಮಾಜಿಕ, ಆರ್ಥಿಕ ಹಾಗೂ ಭೌತಿಕ ಅಭಿವೃದ್ಧಿ ಕಾರ್ಯಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಂಡು ಕಾಮಗಾರಿ ಶ್ರೀ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹುಲಸೂರು ತಾಲೂಕು ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಕೇಂದ್ರವಾಗಿದ್ದು, ಪಟ್ಟಣ ಪಂಚಾಯಿತಿ ೂಷಣೆ ಆಗಿರುವ ಹಿನ್ನೆಲೆಯಲ್ಲಿ ಸಂಬಂಧಿತ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪಟ್ಟಣ ಪಂಚಾಯಿತಿಯಾಗಿ ರೂಪಿಸಲು ಅಧಿಕಾರಿಗಳು ತ್ವರಿತ ಕ್ರಮ ಕೈಗೊಳ್ಳಬೇಕು. ಪಟ್ಟಣದ ಸಮಸ್ಯೆಗಳ ಪರಿಹಾರಕ್ಕೆ ಪೌರಾಡಳಿತ ಇಲಾಖೆಯ ಗಮನ ಹರಿಸಬೇಕು ಎಂದು ತಿಳಿಸಿದರು.
ಸಭೆಗೆ ಗೈರಾದ ೇತ್ರ ಶಿಣಾಧಿಕಾರಿ ಸೇರಿ ಕೆಲವು ಇಲಾಖೆಯ ಅಧಿಕಾರಿಗಳನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡು ನೋಟಿಸ್ ನೀಡುವಂತೆ ತಹಸೀಲ್ದಾರ್ ಅವರಿಗೆ ತಿಳಿಸಿದರು.
ಸಭೆಯಲ್ಲಿ ಆರೋಗ್ಯ, ಸಮಾಜ ಕಲ್ಯಾಣ, ಕೃಷಿ, ತೋಟಗಾರಿಕೆ, ಆಯುಷ್, ಜೆಸ್ಕಾಂ, ಸಾರಿಗೆ ಹಾಗೂ ಪಂಚಾಯತ್ ರಾಜ್ ಸೇರಿ ವಿವಿಧ ಇಲಾಖೆ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಸಾರ್ವಜನಿಕರಿಗೆ ತೊಂದರೆ ಆಗದಂತೆ ಶ್ರೀ ಪರಿಹರಿಸಲು ಸೂಚನೆ ನೀಡಿದರು.
ತಹಸೀಲಾರ್ ಶಿವಾನಂದ ಮೇತ್ರೆ, ತಾಪಂ ಇಒ ಮಹಾದೇವ ಜಮ್ಮು, ಆರೋಗ್ಯ ಇಲಾಖೆ ತಾಲೂಕು ಅಧಿಕಾರಿ ಅಶೋಕ ಮೈಲಾರೆ, ಸಮಾಜ ಕಲ್ಯಾಣ ಅಧಿಕಾರಿ ದಿಲೀಪಕುಮಾರ ಉತ್ತಮ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಗೌತಮ ಶಿಂಧೆ, ಜೆಸ್ಕಾಂ ಸಹಾಯಕ ನಿರ್ದೇಶಕ ಗಣಪತಿ ಮೈನಾಳೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.