ಸತತ ಪ್ರಯತ್ನವೇ ಸಾಧನೆಗೆ ದಾರಿ effort is the path to success
ಮುಳಬಾಗಿಲು: ಸತತ ಪ್ರಯತ್ನ ಮಾಡುವ ಮೂಲಕ ಸಾಧನೆಯ ಹಾದಿಯಲ್ಲಿ ಸಾಗಬೇಕು. ಆಗಲೇ ಜೀವನದಲ್ಲಿ ಅತ್ಯುತ್ತಮ ಸ್ಥಾನ ತಲುಪಲು ಸಾಧ್ಯವಾಗುತ್ತೆ ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ರಹೀಮ್ ಶರೀಪ್ ಹೇಳಿದರು.success
ತಾಲೂಕಿನ ವಿ.ಗುಟ್ಟಹಳ್ಳಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಧನ್ವೇಲ್ ರಾಜ್ಯಮಟ್ಟದ ಶಾಟ್ಪುಟ್ ಸ್ವರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನೆಲೆ ಆಯೋಜಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಮನಸಿದ್ದರೆ ಮಾರ್ಗ ಎಂಬುದಕ್ಕೆ ಇಲ್ಲಿನ ಶಾಲೆಯ ವಿದ್ಯಾರ್ಥಿ ಎಲ್ಲರಿಗೂ ಉದಾಹರಣೆ ಆಗಿದ್ದಾನೆ ಎಂದು ಹೇಳಿದರು.
ಧನ್ವೇಲ್ ಅಂಗವಕಲನಾಗಿದ್ದರೂ ಯಾವುದೇ ಮಾನಸಿಕ ತಳಮಳ ಹೊಂದದೆ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಗೆಲುವು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಇಂತಹ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕಿದೆ ಎಂದರು.
ಮುಖ್ಯಶಿಕ್ಷಕಿ ಸವಿತಾಕುಮಾರಿ ಮಾತನಾಡಿ, ಶಾಲೆಯಲ್ಲಿ ಪಾಠ ಪ್ರವಚನ ಮಾಡುವ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಹ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವಂತೆ ವೇದಿಕೆ ಕಲ್ಪಿಸಿ ಕೊಡಲಾಗುತ್ತಿದೆ. ಇದಕ್ಕೆ ಪಾಲಕರ ಸಹಕಾರವೂ ತುಂಬಾ ಮುಖ್ಯ ಎಂದು ತಿಳಿಸಿದರು.