ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರ ಅಂಗವಾಗಿ ಹೊಸಕೋಟೆ ತಾಲೂಕಿನ ದೊಡ್ಡಕೋಲಿಗದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು. ಗ್ರಾಪಂ ಸದಸ್ಯ ಶಿವಕುಮಾರ್, ಡೇರಿ ಅಧ್ಯಕ್ಷ ರಾಜಣ್ಣ, ರಮೇಶ್ ಇತರರು ಇದ್ದರು.
ಹೊಸಕೋಟೆ : ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ದೊಡ್ಡಕೋಲಿಗ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಶಿವಕುಮಾರ್ ನೇತೃತ್ವದಲ್ಲಿ ಗ್ರಾಮಸ್ಥರಿಗೆ ಸಿಹಿ ಮತ್ತು ಬಿರಿಯಾನಿ ಹಂಚಿ ಸಂಭ್ರಮಿಸಲಾಯಿತು.
ನಂತರ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಲಿ. ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅವರು ಜನಪರ ಕಾಳಜಿಯುಳ್ಳ ಪ್ರಜ್ಞಾವಂತ ಯುವ ರಾಜಕಾರಣೀ. ಅವರಿಗೂ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಬೇಕು ಎಂದರು.
ಎಂ.ಆರ್.ಸಿ ರವಿಕುಮಾರ್ ಮಾತನಾಡಿ, ಡಿಕೆಶಿ ಅವರು ಸಂಕಷ್ಟದ ಸಂದರ್ಭಗಳಲ್ಲಿ ಪಕ್ಷವನ್ನು ಮುನ್ನಡೆಸಿ, ರಾಷ್ಟ್ರಮಟ್ಟದಲ್ಲಿ ಟ್ರಬಲ್ಶೂಟರ್ ಎಂದು ಗುರುತಿಸಿಕೊಂಡವರು. ಅವರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದೆ ಎಂದರು. ಡಿಕೆಶಿ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡುವ ಜತೆಗೆ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜುಗೊಳಿಸುವ ವಿಶ್ವಾಸವಿದೆ. ಮುಂದಿನ ಅವಧಿಯಲ್ಲೂ ಅವರೇ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಆಶಯ ಎಂದರು.