ತಾಪಮಾನ ಜಾಗೃತಿಗೆ ಸಹಕರಿಸಿ temperature 
ರಾಜ್ಯ

ತಾಪಮಾನ ಜಾಗೃತಿಗೆ ಸಹಕರಿಸಿ temperature

ಕೋಲಾರ ಡೆಸ್ಕ್
ಮುಳಬಾಗಿಲು: ಇತ್ತೀಚಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಭಾರಿ ಪ್ರಮಾಣದಲ್ಲಿ ಏರುಪೇರಾಗಿರುವ ಕಾರಣ ಸಾರ್ವಜನಿಕರಿಗೆ ತಾಪದ ಅರಿವು ಮೂಡಿಸಲು ಆರೋಗ್ಯ ಇಲಾಖೆ ಮುಂದಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಸುಗುಣಾ ಹೇಳಿದರು.temperature
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಸೋಮವಾರ ಹಮ್ಮಿಕೊಂಡಿದ್ದ ಬೇಸಿಗೆಯಲ್ಲಿತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾತನಾಡಿ, ಎಳೆ ವಯಸ್ಸಿನ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಬಿಸಿಲಿನ ತಾಪದಿಂದ ಪಾರಾಗುವ ವಿಧಾನಗಳ ಬಗ್ಗೆ ಸೂಕ್ತ ತಿಳಿವಳಿಕೆ ನೀಡಬೇಕು ಎಂದು ತಿಳಿಸಿದರು.
ನಗರ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ, ಸುರಕ್ಷಣಾಧಿಕಾರಿಗಳು, ಆಶಾ ಕಾರ್ಯಕರ್ತರಿಗೆ ಶಾಖದ ಅಲೆ ಮುನ್ಸೂಚನೆಯ ಬಗ್ಗೆ ತಿಳಿಸಿದರು. ತಮ್ಮ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಹೀಟ್​ ಸ್ಟ್ರೊಕ್​,ಅತಿಸಾರ ಮತ್ತು ರ್ನಿಜಲೀಕರಣದ ಪ್ರಕರಣ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಕೊಡಿಸಲು ಕ್ರಮ ವಹಿಸಬೇಕು ಎಂದರು.
ತಾಲೂಕು ಆರೋಗ್ಯ ಅಧಿಕಾರಿಗಳಿಂದ ಆಶಾ ಕಾರ್ಯಕರ್ತೆಯರಿಗೆ ಹೆಡ್​ ಕ್ಯಾಪ್​ ಹಾಗೂ ಒಆರ್​ಎಸ್​ ಪಾನೀಯ ವಿತರಿಸಲಾಯಿತು.