ಬೈಲಹೊಂಗಲ ನಗರಸಭೆ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರೊ$್ಯತ್ಸವ ಕಾರ್ಯಕ್ರಮದಲ್ಲಿ ಮಾಜಿ ಯೋಧರು, ಎಸ್​ಐಆರ್​ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಮಹಾಂತೇಶ ಕೌಜಲಗಿ, ಪ್ರವಿಣ ಜೆನ, ಸದಾಶಿವ ಮಕ್ಕೋಜಿ ಇತರರಿದ್ದರು. 
ರಾಜ್ಯ

ದೇಶದ ಪ್ರಗತಿಗೆ ಕೊಡುಗೆ ನೀಡಿ

ವಿಜಯವಾಣಿ ಸುದ್ದಿಜಾಲ

ಬೈಲಹೊಂಗಲ


ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ&ಬಲಿದಾನ ಸ್ಮರಿಸುವುದು ಪ್ರತಿ ಭಾರತೀಯನ ಕರ್ತವ್ಯವಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ದೇಶಪ್ರೇಮ, ಧೆರ್ಯ ಮತ್ತು ಆದರ್ಶ ಇಂದಿನ ಪೀಳಿಗೆ ಅಳವಡಿಸಿಕೊಂಡು ದೇಶದ ಏಕತೆ, ಸಮಗ್ರತೆ ಹಾಗೂ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ನಗರಸಭೆ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬೆಲಹೊಂಗಲ ನಾಡು ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ತನ್ನದೇ ಆದ ಮಹತ್ವವನ್ನು ಹೊಂದಿದೆ. ವೀರರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ ಸೇರಿದಂತೆ ಅನೇಕ ಮಹನೀಯರು ಬ್ರಿಟಿಷರ ವಿರುದ್ಧ ಧೆರ್ಯ ಹಾಗೂ ಶೌರ್ಯದಿಂದ ಹೋರಾಡಿ ದೇಶದ ಸ್ವಾತಂತ್ರ$್ಯಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ್ದಾರೆ ಎಂದರು.
ಉಪವಿಭಾಗಾಧಿಕಾರಿ ಪ್ರವಿಣ ಜೆನ ಮಾತನಾಡಿ, ದೇಶದ ಸ್ವಾತಂತ್ರ$್ಯಕ್ಕಾಗಿ ಸಾವಿರಾರು ದೇಶಪ್ರೇಮಿಗಳು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅವರ ತ್ಯಾಗದ ಲವಾಗಿ ನಮಗೆ ಸ್ವಾತಂತ್ರ$್ಯ ದೊರೆತಿದ್ದು, ಅವರ ಆಶಯದಂತೆ ಶಕ್ತಿಶಾಲಿ ಹಾಗೂ ಭವ್ಯ ಭಾರತ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಡಾ.ಮಹಾಂತೇಶ ಕಳ್ಳಿಬಡ್ಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ಡಿವೆಎಸ್​ಪಿ ಡಾ.ವೀರಯ್ಯ ಹಿರೇಮಠ, ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ, ೇತ್ರ ಶಿಣಾಧಿಕಾರಿ ರವಿ ಹಿರೇಮಠ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಯಾನಂದ ನರಸಣ್ಣವರ, ಸಿಪಿಐ ಪ್ರಮೋದ ಯಲಿಗಾರ, ಪುರಸಭೆ ಮಾಜಿ ಉಪಾಧ್ಯ ಮಹಾಂತೇಶ ತುರಮರಿ, ಪ್ರೊಬೇಷನರಿ ಪಿಎಸ್​ಐ ಬಸವರಾಜ ಜಾಲಾಪುರ ಇತರರಿದ್ದರು. ತಹಸೀಲ್ದಾರ್​ ಸದಾಶಿವ ಮಕ್ಕೋಜಿ ಸ್ವಾಗತಿಸಿದರು. ಶಿಕ ರಾಜು ಹಕ್ಕಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.