ಜಿಲ್ಲಾಧಿಕಾರಿ ಇಕ್ರಮ್ ಶರೀಫ್
- ಜಿಲ್ಲಾ ಚುನಾವಣಾಧಿಕಾರಿ ಇಕ್ರಮ್ ಶರೀಫ್ ಸೂಚನೆ
- ಅಕ್ಟೋಬರ್ 7ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ
ಕಲಬುರಗಿ: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದ್ದು, ಕಲಬುರಗಿ ಜಿಲ್ಲೆಯಲ್ಲಿ ದೋಷಪೂರಿತ ಸ್ವಚ್ಛ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಯೂ ಆದ ಚುನಾವಣಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗವು ಎಸ್ಐಆರ್ ಮೂರನೇ ಹಂತದಲ್ಲಿ ಕರ್ನಾಟಕ ರಾಜ್ಯದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಸುವ ಕುರಿತು ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 20ರಿಂದ ಜಿಲ್ಲೆಯಲ್ಲಿ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
2026ನೇ ಅಕ್ಟೋಬರ್ 1 ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಈ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯ ನಡೆಯಲಿದೆ. ಜೂನ್ 20 ರಿಂದ 29ರವರೆಗೆ ಚುನಾವಣಾ ಸಿಬ್ಬಂದಿಗೆ ತರಬೇತಿ, ಪೂರ್ವಸಿದ್ಧತೆ ಮುದ್ರಣ ಕಾರ್ಯ ಜರುಗಲಿದೆ. ಜೂನ್ 30 ರಿಂದ ಜುಲೈ 29ರವರೆಗೆ ಬಿಎಲ್ಒಗಳು ಮನೆ&ಮನೆಗೆ ಭೇಟಿ ನೀಡಿ ಅರ್ಜಿ ವಿತರಿಸಿ, ಸಂಗ್ರಹ ಮಾಡಲಿದ್ದಾರೆ. ಈ ಅವಧಿಯಲ್ಲಿ ಮತಗಟ್ಟೆಗಳ ರ್ಯಾಂಡಮೈಜೇಷನ್ ಕಾರ್ಯ ಒಟ್ಟಿಗೆ ನಡೆಯಲಿದೆ. ಆಗಸ್ಟ್ 5ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದೆ ಎಂದರು.
ಬಿಎಲ್ಒ ಸೂಪರ್ವೈಸರ್ ನೇಮಕ
ಕಲಬುರಗಿ ಜಿಲ್ಲೆಯಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪಟ್ಟಿ ತಯಾರಿಕೆಗೆ ಸಂಬಂಧಿಸಿದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲೆಯ 9 ವಿಧಾನಸಭಾ ೇತ್ರಗಳಲ್ಲಿ 11,89,398 ಪುರುಷ, 11,84,171 ಮಹಿಳೆಯರು, 340 ಇತರೆ ಸೇರಿ ಒಟ್ಟು 23,73,909 ಮತದಾರರಿದ್ದು, 2,400 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟೆಗೆ ಬೂತ್ ಲೇವಲ್ ಆಫೀಸರ್ ನೇಮಕ ಮಾಡಲಾಗಿದ್ದು, ಬಿ.ಎಲ್.ಓ ಗಳ ಮೇಲುಸ್ತುವಾರಿಗೆ 275 ಜನರನ್ನು ಬಿ.ಎಲ್.ಓ ಸೂಪರ್ವೈಸರ್ಗಳನ್ನು ನೇಮಕ ಮಾಡಲಾಗಿದೆ ಎಂದರು.
ಬೂತ್ವಾರು ಶುದ್ಧ ಮತದಾರರ ಪಟ್ಟಿ ಮತ್ತು ಮ್ಯಾಪಿಂಗ್ ಕಾರ್ಯಕ್ಕೆ ಸಹಕರಿಸಲು ಬೂತ್ ಲೇವೆಲ್ ಏಜೆಂಟರನ್ನು ನೇಮಕ ಮಾಡುವಂತೆ ಈಗಾಗಲೆ ರಾಜಕೀಯ ಪಕ್ಷಗಳಿಗೆ ಸೂಚಿಸಲಾಗಿದೆ. ಮನೆಗೆ ಬರುವ ಬಿಎಲ್ಒಗಳಿಗೆ ಮತದಾರರು ಅಗತ್ಯ ಸಹಕಾರ ನೀಡಬೇಕು. ಎಸ್ಐಆರ್ ಕುರಿತು ಸಾರ್ವಜನಿಕರಲ್ಲಿ ಯಾವುದೇ ರೀತಿ ಗೊಂದಲಗಳಿದ್ದಲ್ಲಿ ಆಯಾ ಮತೇತ್ರದ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಇಕ್ರಮ್ ಶರೀಫ್ ತಿಳಿಸಿದರು.
2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಎಸ್.ಐ.ಆರ್. ಕಾರ್ಯ ತೀವ್ರಗೊಳಿಸಲು ಬಿಎಲ್ ಹಂತದಲ್ಲಿ ಸೌಲಭ್ಯ ಕೇಂದ್ರ ಸ್ಥಾಪನೆ ಮಾಡಲಾಗುತ್ತಿದೆ. ಗ್ರಾಮೀಣ ವಿಭಾಗದಲ್ಲಿ ಮತದಾರರ ಸೌಲಭ್ಯ ಕೇಂದ್ರ ಸ್ಥಾಪನೆಗೆ ಜಿಲ್ಲಾ ಪಂಚಾಯಿತಿ ಸಿಇಒಗೆ ನಿರ್ದೇಶನ ನೀಡಲಾಗಿದೆ. ಬಿಎಲ್ಒ ಮತ್ತು ಬಿಎಲ್ಎಗಳು ಇದರ ಸದುಪಯೋಗ ಪಡೆದು ಪರಸ್ಪರ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಸಂಕನೂರ್, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಇದ್ದರು.
"
ಕರಡು ಪಟ್ಟಿಗೆ ಆಗಸ್ಟ್ 5 ರಿಂದ ಸೆಪ್ಟೆಂಬರ್ 4ರವರೆಗೆ ಆೇಪಣೆ ಆಹ್ವಾನಿಸಿ ಅಕ್ಟೋಬರ್ 3ರೊಳಗೆ ಆೇಪಣೆ ವಿಲೇವಾರಿ ಮಾಡಿ ಅಕ್ಟೋಬರ್ 7ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
— ಇಕ್ರಮ್ ಶರೀಫ್, ಜಿಲ್ಲಾ ಚುನಾವಣಾಧಿಕಾರಿ, ಕಲಬುರಗಿ.