ಹೊಳೆನರಸೀಪುರ ತಾಲೂಕಿನ ಶ್ರೀರಾಮ ದೇವರ ಅಣೆಕಟ್ಟೆ ಆವರಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಹಾಗೂ ಎ.ಮಂಜು ಮಾತನಾಡಿದರು. 
ರಾಜ್ಯ

ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣಕ್ಕೆ ಸಹಕಾರ

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಡಿ.ರೇವಣ್ಣ
  • ಶ್ರೀರಾಮ ದೇವರ ಅಣೆಕಟ್ಟೆ ಆವರಣ

ಹೊಳೆನರಸೀಪುರ:

ಮೂರು ದಶಕಗಳ ರಾಜಕೀಯ ಜೀವನದಲ್ಲಿ ಪತ್ರಕರ್ತರ ರಚನಾತ್ಮಕ ಸಲಹೆ ಹಾಗೂ ವಿಮರ್ಶೆ ಜನಸೇವೆಗೆ ಮಾರ್ಗದರ್ಶನ ನೀಡಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.

ತಾಲೂಕಿನ ಶ್ರೀರಾಮ ದೇವರ ಅಣೆಕಟ್ಟೆ ಆವರಣದಲ್ಲಿ ಮಂಗಳವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗೆ ಪತ್ರಿಕಾರಂಗದ ಕೊಡುಗೆ ಅಪಾರ. ಅಲ್ಲದೆ ಹೊಳೆನರಸೀಪು ರದಲ್ಲಿ ಪತ್ರಕರ್ತರಿಗಾಗಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಅರಕಲಗೂಡು ಶಾಸಕ ಎ.ಮಂಜು ಮಾತನಾಡಿ, ಪತ್ರಿಕಾರಂಗ ಸಮಾಜದ ಕನ್ನಡಿಯಾಗಿದ್ದು, ಜನರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತಂದು ನ್ಯಾಯ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಹೊಳೆನರಸೀಪುರದಲ್ಲಿಯೂ ಭವನ ಸೌಲಭ್ಯ ಕಲ್ಪಿಸಬೇಕು. ಅನಾರೋಗ್ಯದಿಂದ ಬಳಲುತ್ತಿರುವ ಪತ್ರಕರ್ತ ರಾಧಾಕೃಷ್ಣ ಅವರಿಗೆ ಸಂಘದ ವತಿಯಿಂದ 10 ಸಾವಿರ ರೂ. ಆರ್ಥಿಕ ನೆರವು ಘೋಷಿಸಿದರಲ್ಲದೆ, ತಾಲೂಕಿನಲ್ಲಿ ಪತ್ರಕರ್ತರ ಭವನ ಹಾಗೂ ಕಚೇರಿ ನಿರ್ಮಾಣಕ್ಕೆ ನಿವೇಶನ ಒದಗಿಸುವಂತೆ ಮಾಜಿ ಸಚಿವ ರೇವಣ್ಣ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಆರ್.ಕೆಂಚೇಗೌಡ ಮಾತನಾಡಿ, ಪತ್ರಕರ್ತರ ಹೆಸರಿನಲ್ಲಿ ಬ್ಲಾಕ್‌ಮೇಲ್, ಹಣ ವಸೂಲಿ ಹಾಗೂ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ರಾಜ್ಯ ಉಪಾಧ್ಯಕ್ಷ ಮದನಗೌಡ ಮಾತನಾಡಿ, ಯೂಟ್ಯೂಬ್, ಸಾಮಾಜಿಕ ಜಾಲತಾಣ ಹಾಗೂ ಆರ್‌ಟಿಐ ಹೆಸರಿನಲ್ಲಿ ಕೆಲವರು ಪತ್ರಕರ್ತರಂತೆ ವರ್ತಿಸಿ ಅಧಿಕಾರಿಗಳಿಗೆ ಅನಗತ್ಯ ಒತ್ತಡ ಹೇರುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಜಿಲ್ಲಾ ಪತ್ರಕರ್ತರಾದ ನಂಜುಂಡೇಗೌಡ, ರವಿ ನಾಕಲಗೂಡು, ಪ್ರಕಾಶ್, ತಹಸೀಲ್ದಾರ್ ವಿ.ಎಂ.ರೇಣುಕುಮಾರ್, ವಿಶೇಷ ಭೂಸ್ವಾಧೀನಾ ಧಿಕಾರಿ ಡಾ.ಮಂಜುನಾಥ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಬಿ.ಪುಟ್ಟೇಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಎಸ್.ಪುಟ್ಟಸೋಮಪ್ಪ ಇತರರಿದ್ದರು.