ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆ ಭರ್ತಿಯಲ್ಲಿ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ತಕ್ಷಣ ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್​ ಸದಸ್ಯ ಶಶೀಲ್​ ನಮೋಶಿಯವರು ಕಲಬುರಗಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್​ಗೆ ಮನವಿಪತ್ರ ಸಲ್ಲಿಸಿದರು. 
ರಾಜ್ಯ

371(ಜೆ) ಅಭ್ಯರ್ಥಿಗಳಿಗಾದ ಅನ್ಯಾಯ ಸರಿಪಡಿಸಿ

ಪ್ರಮುಖ ಮುಖ್ಯಾಂಶಗಳು

  • ಪ್ರಾಚಾರ್ಯರ ಹುದ್ದೆ ಭರ್ತಿ
ಕಲಬುರಗಿ: ಸರ್ಕಾರಿ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆ ಭರ್ತಿಯಲ್ಲಿ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ತಕ್ಷಣ ಇದನ್ನು ಸರಿಪಡಿಸಬೇಕು ಎಂದು ವಿಧಾನ ಪರಿಷತ್​ ಸದಸ್ಯ ಶಶೀಲ್​ ನಮೋಶಿ ಮನವಿ ಮಾಡಿದರು.
ಕಲಬುರಗಿಗೆ ಮಂಗಳವಾರ ಆಗಮಿಸಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರನ್ನು ಭೇಟಿ ಮಾಡಿ, ಸರ್ಕಾರಿ ಪದವಿ ಕಾಲೇಜುಗಳ ಪ್ರಾಚಾರ್ಯರ ಗ್ರೇಡ್​&1 ಹುದ್ದೆ ಭರ್ತಿಗೆ 2022ನೇ ಡಿಸೆಂಬರ್​ 13ರಂದು ಮಿಕ್ಕುಳಿದ ವೃಂದದ 265 ಹಾಗೂ ಸ್ಥಳಿಯ ವೃಂದದ 45 ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಾ ಪ್ರಾಧಿಕಾರ ಮೂಲಕ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀೆ ನಡೆಸಲಾಗಿದೆ. ಆದರೆ ಅಂತಿಮ ಆಯ್ಕೆಪಟ್ಟಿ ಸಿದ್ಧಪಡಿಸುವ ಸಂದರ್ಭದಲ್ಲಿ ಎಲ್ಲಾ ನೇಮಕಾತಿ ಪ್ರಾಧಿಕಾರಗಳು ಕಡ್ಡಾಯವಾಗಿ ಅನುಸರಿಸಬೇಕಾದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆ ಸೂಚನೆ ಉಲ್ಲಂಸಿ ಆಯ್ಕೆಪಟ್ಟಿ ತಯಾರಿಸಲಾಗಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಸಂವಿಧಾನದ 371(ಜೆ) ನಿಯಮ ಸ್ಪಷ್ಟ ಉಲ್ಲಂನೆಯಾಗಿದೆ ಎಂದು ವಿವರಿಸಿದರು.
ತಣ ಪ್ರಸ್ತುತ ಆಯ್ಕೆಪಟ್ಟಿ ರದ್ದುಗೊಳಿಸಿ, ಸುತ್ತೋಲೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ನ್ಯಾಯಸಮ್ಮತವಾಗಿ ಹೊಸ ಆಯ್ಕೆಪಟ್ಟಿ ಪ್ರಕಟಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.