ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಕಂಟೇನರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಉತ್ತರಪ್ರದೇಶ ಮೂಲದ ದಂಪತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗ್ರಾಮಸ್ಥರ ಪ್ರತಿಭಟನೆ
ಅಪಘಾತ ಸಂಭವಿಸುತ್ತಿದ್ದಂತೆ ಆಕ್ರೋಶಗೊಂಡ ಸ್ಥಳಿಯರು ಬ್ಯಾರಿಕೇಡ್ ರಸ್ತೆಗೆ ಅಡ್ಡ ಹಾಕಿ, ಸಂಚಾರ ತಡೆದು ಪ್ರತಿಭಟಿಸಿದರು. ಲಿಂಗಶೆಟ್ಟಿಪುರ ಗೇಟ್ ಬಳಿ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು ಟ್ರಾಫಿಕ್ ಜಾಮ್, ಅತಿ ವೇಗದ ಸಂಚಾರಕ್ಕೆ ಕಡಿವಾಣ ಹಾಕಲು ಮೇಲ್ಸೇತುವೆ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಭರವಸೆ ನೀಡಬೇಕೆಂದು ಪಟ್ಟು ಹಿಡಿದರು. ಧಿಕ್ಕಾರದ ೂಷಣೆಗಳನ್ನು ಕೂಗಿದರು.