ದೊಡ್ಡಬಳ್ಳಾಪುರದ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದಿಂದ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರಿಗೆ ಮನವಿ ಸಲ್ಲಿಸಿದರು. ಅಧ್ಯಕ್ಷ ಬಿ.ಎಸ್​ ಚಂದ್ರಶೇಖರ್​, ಪ್ರಧಾನ ಕಾರ್ಯದರ್ಶಿ ಆರ್​ ರಮೇಶ್​, ಮುಖಂಡ ಪಿ ವಾಸು, ಜಿಲ್ಲಾ ಯುವ ಟಕ ಅಧ್ಯಕ್ಷ ರಂಜಿತ್​ ಗೌಡ. ತಾಲೂಕು ಅಧ್ಯಕ್ಷ ವಿನಯ್​ ಆರಾಧ್ಯ. ತಾಲೂಕು ಕಾರ್ಯದರ್ಶಿ ಪ್ರದಿಪ್​ ಕುಮಾರ್​ ಇದ್ದರು. 
ರಾಜ್ಯ

ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ / DODDABALLAPUR

ದೊಡ್ಡಬಳ್ಳಾಪುರ : ಅರೆಹಳ್ಳಿಗುಡ್ಡದಹಳ್ಳಿಯ ಸರ್ವೇ ನಂ.57ರಲ್ಲಿ 10 ಎಕರೆ ಗೋಮಾಳ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಅದರಲ್ಲಿ 6 ಎಕರೆ ಜಮೀನನ್ನು ಭೂಗಳ್ಳರು ವಶಪಡಿಸಿಕೊಂಡಿದ್ದಾರೆ. ಇದಕ್ಕೆ ನೆರವು ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದಿಂದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರಿಗೆ ಮನವಿ ಸಲ್ಲಿಸಲಾಯಿತು.
ಮ್ಯುಟೇಷನ್​ನಲ್ಲಿ ಇಲ್ಲದ ಪುಟಗಳನ್ನು ಸೇರಿಸಿ ನಕಲಿ ಸಹಿ ಹಾಕುವ ಮೂಲಕ ದಾಖಲೆಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಗೋಮಾಳ ಜಾಗವನ್ನು ಒತ್ತುವರಿ ಮಾಡಲಾಗಿದೆ. ಇದಕ್ಕೆ ಅಧಿಕಾರಿಗಳು ನೆರವು ನೀಡಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣ ಪದಾಧಿಕಾರಿಗಳು ದೂರಿದರು.
ಈ ಕುರಿತು ಪ್ರತಿಕ್ರಿಯಿಸಿದ ವೇದಿಕೆ ಅಧ್ಯಕ್ಷ ಬಿ.ಎಸ್​.ಚಂದ್ರಶೇಖರ್​, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ನಗರದ ಅಂಚಿನಲ್ಲಿರುವ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನಿನ ತಿರುಚಿದ ದಾಖಲೆಗಳನ್ನು ಇಟ್ಟುಕೊಂಡು ಭೂಗಳ್ಳರು ಖಾತೆ ಮಾಡಿಕೊಡುವಂತೆ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ದೂರು ಸಲ್ಲಿಸಿ, ಖಾತೆ ಪಡೆಯಲು ಆದೇಶ ಪಡೆದಿದ್ದಾರೆ. ಉಪವಿಭಾಗಾಧಿಕಾರಿ ಆದೇಶವನ್ನು ಜಿಲ್ಲಾಧಿಕಾರಿ ರದ್ದುಗೊಳಿಸಿ, ಸರ್ಕಾರದ ವಶಕ್ಕೆ ಪಡೆದಿದ್ದಾರೆ. ಇದರ ಹೊರತಾಗಿಯೂ, ಭೂ ಸುರಾ ಯೋಜನೆ ಬಳಸಿಕೊಂಡ ಭೂಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸರ್ಕಾರಿ ಜಾಗ ಕಬಳಿಸಲು ಹುನ್ನಾರ ರೂಪಿಸಿದ್ದಾರೆ. ಈ ದಾಖಲೆ ಸೃಷ್ಟಿಸಲು ಸಹಕರಿಸಿದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಭೂ ಸುರಾ ಯೋಜನೆಯಡಿ ಹಳೆಯ ದಾಖಲೆಗಳನ್ನು ಸ್ಕಾ$್ಯನಿಂಗ್​ ಮಾಡುತ್ತಿರುವ ಕೇಂದ್ರ ಹಾಗೂ ಹಳೆಯ ದಾಖಲೆ ಕೊಠಡಿಯಲ್ಲಿ ಸಿ.ಸಿ. ಕ್ಯಾಮರಾ ಅಳವಡಿಸಬೇಕು. ಈ ಕೂಡಲೇ ಜಿಲ್ಲಾಧಿಕಾರಿಗಳು ಪೊಲೀಸರಿಗೆ ದೂರು ನೀಡಿ ಈ ಪ್ರಕರಣದ ಕಡತಗಳನ್ನು ವಶಕ್ಕೆ ಪಡೆಯಬೇಕು ಎಂದರು.