ಅತ್ಯಾಚಾರಿಗೆ ಶಿಕ್ಷೆ ಪ್ರಕಟ 
ರಾಜ್ಯ

ಅತ್ಯಾಚಾರಿಗೆ ೩೦ ವರ್ಷ ಶಿಕ್ಷೆ ಪ್ರಕಟ

ಪ್ರಮುಖ ಮುಖ್ಯಾಂಶಗಳು

  • ಅತ್ಯಾಚಾರಿಗೆ ೩೦ ವರ್ಷ ಶಿಕ್ಷೆ ಪ್ರಕಟ
  • ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯದಿಂದ ತೀರ್ಪು
  • ಹಿರೇಬಾಗೇವಾಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ
ಅತ್ಯಾಚಾರಿಗೆ ೩೦ ವರ್ಷಶಿಕ್ಷೆ ಪ್ರಕಟ
ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿದ್ದ ತಾಲೂಕಿನ ಅರಳಿಕಟ್ಟಿ ಗ್ರಾಮದ ನಿವಾಸಿ ಮಹಾಂತೇಶ ಶಿವಪ್ಪ ಉರ್ಪ ಶಿವಾನಂದ ಗಿರೆಣ್ಣವರ(೨೩) ಅಪರಾಧಿಗೆ ೩೦ ವರ್ಷ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಿದೆ.
ಬಾಲಕಿಯು ಮನೆಯಲ್ಲಿ ಒಬ್ಬಳೆ ಇದ್ದಾಗ ಅಪರಾಧಿಯು ಒತ್ತಾಯ ಪೂರ್ವಕವಾಗಿ ಅತ್ಯಾಚಾರ ಎಸಗಿರುವ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ೨೦೨೫ರಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಸುಂದ್ರೇಶ ಹೊಳೆನ್ನವರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಅಪರಾಧಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ ಹೇಳಿದ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ರೂ.ಪರಿಹಾರ ನೀಡುವಂತೆ ಸೂಚಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ್ ವಾದ ಮಂಡಿಸಿದ್ದರು.