ವಾಣಿಜ್ಯ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕ ಆತ್ಮಹತ್ಯೆ 
ರಾಜ್ಯ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕ ಆತ್ಮಹತ್ಯೆ!

ಪ್ರಮುಖ ಮುಖ್ಯಾಂಶಗಳು

  • ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕ ಆತ್ಮಹತ್ಯೆ
  • ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಘಟನೆ
  • ಹೋಟೆಲ್ ಬಂದ್ ನಿಂದ ಆರ್ಥಿಕ ನಷ್ಟದಿಂದ ಆತ್ಮಹತ್ಯೆ


ವಾಣಿಜ್ಯ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕ ಆತ್ಮಹತ್ಯೆ !
ಹುಕ್ಕೇರಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಲಭ್ಯವಾಗದ ಹೋಟೆಲ್ ವ್ಯವಹಾರ ಸ್ಥಗಿತಗೊಂಡಿದೆ, ಇದರಿಂದ ಸಾಲದ ಬಡ್ಡಿ ಒತ್ತಡ ತಾಳಲಾರದೆ ಹೋಟೆಲ್ ಮಾಲೀಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಕ್ಕೇರಿ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ಘಟನೆ ವಿವರ: ಹುಕ್ಕೇರಿ ಪಟ್ಟಣದ ಹಳೇ ಬಸ್ ನಿಲ್ದಾಣ ಬಳಿಯ ಹನುಮಾನ ಹೊಟೇಲ ನಡೆಸುತ್ತಿದ್ದ ರಾಮ ಹಳ್ಳೂರಿ (೫೦) ಕಳೆದ ಕೆಲವು ದಿನಗಳಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಿಗದ ಕಾರಣ ಹೋಟೆಲ್ ಸಂಪೂರ್ಣವಾಗಿ ಬಂದ್ ಆಗಿದೆ. ಇದರಿಂದ ಆದಾಯ ಇಲ್ಲದೇ ಆರ್ಥಿಕ ಸಂಕಷ್ಟ ಗಂಭೀರವಾಗಿದೆ. ಸಾಲದ ಒತ್ತಡ ಮತ್ತು ವ್ಯಾಪಾರ ನಷ್ಟದಿಂದ ಮಾನಸಿಕವಾಗಿ ಕುಗ್ಗಿದ ರಾಮ ಹಳ್ಳೂರಿ ಮಂಗಳವಾರ ಬೆಳಿಗ್ಗೆ ಹೊಟೇಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕುಟುಂಬಸ್ಥರು ತಿಳಿಸಿದ್ದಾರೆ.